ವಿಟ್ಲ: ಗಾಂಜಾ ಸಹಿತ ವ್ಯಕ್ತಿಯ ಬಂಧನ ಡಿಸಿಐಬಿ ಪೊಲೀಸರ ಕಾರ್ಯಾಚರಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಆಟೋ ರಿಕ್ಷಾ ವೊಂದರಲ್ಲಿ ಅಕ್ರಮವಾಗಿ ಗಾಂಜ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಡಿಸಿಐಬಿ ಪೊಲೀಸರ ತಂಡ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವೀರಕಂಬ ಗ್ರಾಮದ ಬೆಂಜಂತಿಮಾರು ಎಂಬಲ್ಲಿ ಬಂಧಿಸಿದೆ.

ಕಾಸರಗೋಡು ಜಿಲ್ಲೆಯ, ಮಂಜೇಶ್ವರ ತಾಲೂಕಿನ, ಕೈಕಂಬ ನಿವಾಸಿ ಮಹಮ್ಮದ್ ಅಲಿ ಯಾನೆ ಅಸ್ರು (27 ವ.) ಬಂಧಿತ ಆರೋಪಿ. ಡಿಸಿಐಬಿ ಪೊಲೀಸರ ತಂಡಕ್ಕೆ ಲಭಿಸಿದ ಖಚಿತ ವರ್ತಮಾನದ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಬಂಧಿತ ಆರೋಪಿಯ ಆಟೋ ರಿಕ್ಷಾದಲ್ಲಿ ಸುಮಾರು 840ಗ್ರಾಂ ನಷ್ಟು ಗಾಂಜಾ ಪತ್ತೆಯಾಗಿದೆ.

ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಇನ್ನಷ್ಟು ವಿಚಾರಣೆ ನಡೆಸಿದಾಗ ಕುದ್ದುಪದವು ಎಂಬಲ್ಲಿ ವ್ಯಕ್ತಿ ಯೋರ್ವರ ಗಮನ ಬೇರೆಡೆಗೆ ಸೆಳೆದು ಹಣ ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದ. ಬಂಧಿತ ಆರೋಪಿಯ ವಿರುದ್ಧ ಕೇರಳ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 10 ಪ್ರಕರಣ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ವಿಟ್ಲ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡಿಸಿಐಬಿ ಪೊಲೀಸ್ ನಿರೀಕ್ಷಕರಾದ ಚೆಲುವರಾಜು ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಲಕ್ಷ್ಮಣ್ ಕೆಜಿ, ಉದಯ ರೈ, ಪ್ರವೀಣ್ ಎಂ., ತಾರಾನಾಥ್, ಪ್ರವೀಣ್ ರೈ, ಚಾಲಕ ಶೋನ್ ಷಾ, ಸುರೇಶ್ ರವರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಟ್ಲ ಠಾಣೆಯ ಸಿಬ್ಬಂದಿಗಳಾದ ಜಯರಾಮ, ಪ್ರಸನ್ನ, ಲೋಕೇಶ್ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.