Breaking News

ರೈತ ದಲಿತ ಕಾರ್ಮಿಕ ಜನಪರ ಚಳುವಳಿ ಒಕ್ಕೂಟದಿಂದ ಅಹೋರಾತ್ರಿ ಚಳುವಳಿಗೆ ಸಿದ್ಧತೆ

Puttur_Advt_NewsUnder_1
Puttur_Advt_NewsUnder_1
  • ಸೆ.11 ಕ್ಕೆ ರೈತ ವಿಚಾರ ಗೋಷ್ಟಿ ಮತ್ತು ಸಂವಾದ – ರವಿಕಿರಣ್ ಪುಣಚ

ಪುತ್ತೂರು : ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾನೂನು ಅಗತ್ಯ ಸರಕುಗಳ ಕಾಯ್ದೆಗಳ ತಿದ್ದುಪಡಿ ಹಾಗೂ ವಿದ್ಯುತ್ ಖಾಸಗೀಕರಣ ಹಾಗೂ ಮೇಲ್ಜಾತಿಯವರಿಗೆ ಶೇ. 10 ಮೀಸಲಾತಿಯನ್ನು ವಿರೋಧಿಸಿ ವಿಧಾನಸಭಾ ಅಧಿವೇಶನ ಮುಗಿಯುವ ತನಕ ಅಹೋರಾತ್ರಿ ಚಳುವಳಿ ನಡೆಸಲು ಸಿದ್ದತೆ ನಡೆಸಲಾಗಿದ್ದು ಸೆ.11ರಂದು ಬಿ.ಸಿ ರೋಡ್ ರಂಗೋಲಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಮಟ್ಟದ ವಿಚಾರ ಗೋಷ್ಟಿ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಸಾಮಾಜಿಕ ಚಿಂತಕರು ಹಾಗೂ ಪತ್ರಕರ್ತರಾದ ಶಿವ ಸುಂದರ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷ ವಕೀಲ ಬಡಗಲಪುರ ನಾಗೇಂದ್ರ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ವಿಚಾರ ಮಂಡಿಸಲಿದ್ದಾರೆ. ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ.ಯಾದವ ಶೆಟ್ಟಿ, ಸಿ.ಐ.ಟಿ.ಯು ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಪ್ರೊ ಬಿ.ಕೃಷ್ಣಪ್ಪ ಸ್ಥಾಪಿತ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಎಂ.ದೇವದಾಸ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದ ಇದರ ರಾಜ್ಯ ಸಂಘಟನಾ ಸಂಚಾಲಕರಾದ ಚಂದು .ಎಲ್, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ಜಿಲ್ಲಾ ಸಂಯೋಜಕರಾದ ವಿದ್ಯಾ ದಿನಕರ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೃಷ್ಣಪ್ಪ ಸಾಲ್ಯಾನ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡರಾದ ರಾಮಣ್ಣ ವಿಟ್ಲ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪಾಲಾದೆ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ತಾದ ಓಸ್ವಲ್ ಪ್ರಕಾಶ್ ಫರ್ನಾಂಡಿಸ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದ ಇದರ ಜಿಲ್ಲಾ ಸಂಚಾಲಕರಾದ ಜಗದೀಶ್ ಪಾಂಡೇಶ್ವರ, ಡಿ.ವೈ.ಎಫ್.ಎ ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ದಲಿತ ಸಂಘರ್ಷ ಸಮಿತಿ ಪ್ರೊ ಕೃಷ್ಣಪ್ಪ ಸ್ಥಾಪಿತ ಇದರ ಜಿಲ್ಲಾ ಸಂಚಾಲಕರಾದ ರಘು ಕೋಟ್ಯಾನ್, ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕರಾದ ರಾಜಾ ಚೆಂಡ್ತಿಮಾರ್ ಕರಾವಳಿ ಜನಾಭಿವೃದ್ಧಿ ವೇದಿಕೆಯ ಶಬೀರ್ ಅಹಮದ್, ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಬಿ.ಕೆ.ಸೇಸಪ್ಪ ಬೆದ್ರಕಾಡು ಮುಂತಾದವರು ಭಾಗವಹಿಸಲಿದ್ದಾರೆ ಎಂದ ಅವರು ಸೆ.೨೧ ರ ಬಳಿಕ ವಿಧಾನಸಭೆ ಅಧಿವೇಶನ ಆರಂಭವಾಗಿ ಮುಗಿಯುವ ತನಕ ನಮ್ಮ ಒಕ್ಕೂಟದಿಂದ ಅಹೋರಾತ್ರಿ ಚಳುವಳಿ ನಡೆಯಲಿದೆ. ಇದರ ಜೊತೆಯಲ್ಲೇ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಚಳುವಳಿಗಳು ನಡೆಯಲಿದೆ ಎಂದು ಅವರು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಒಕ್ಕೂಟದ ಪುತ್ತೂರು ವಲಯ ಉಪಾಧ್ಯಕ್ಷ ಮನೋಹರ್ ಕೋಡಿಜಾಲು, ರೈತ ಸಂಘದ ವಿಟ್ಲ ಮುಖಂಡ ರಾಮಣ್ಣ ವಿಟ್ಲ,ಲೊಕೇಶ್ ತೆಂಕಿಲ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.