Breaking News

ನ. 15ರೊಳಗೆ ಸಹಕಾರ ಸಂಘಗಳ ಚುನಾವಣೆ ಪೂರ್ಣ | ಚುನಾವಣಾ ಪ್ರಾಧಿಕಾರದ ಆಯುಕ್ತರ ಸೂಚನೆ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಸಹಕಾರ ಸಂಘಗಳ ಚುನಾವಣಾ ಪ್ರಕ್ರಿಯೆಯನ್ನು ನವಂಬರ್ 15ರೊಳಗೆ ಪೂರ್ಣಗೊಳಿಸುವಂತೆ ಸಹಕಾರ ಸಂಘಗಳ ಚುನಾವಣಾ ಪ್ರಾಧಿಕಾರದ ಆಯುಕ್ತ ಡಾ. ಎನ್.ಎಸ್. ಚನ್ನಪ್ಪ ಗೌಡ ಸೂಚನೆ ನೀಡಿದ್ದಾರೆ.

ರಾಜ್ಯದ ಪ್ರಾಥಮಿಕ, ಮಾಧ್ಯಮಿಕ ಹಾಗೂ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿರುವ ಆಯುಕ್ತರು, ಕರ್ನಾಟಕ ರಾಜ್ಯದ ಪ್ರಾಥಮಿಕ, ಮಾಧ್ಯಮಿಕ, ಫೆಡರಲ್ ಸಹಕಾರ ಸಂಘಗಳ ಚುನಾವಣೆ ಪ್ರಕ್ರಿಯೆಯನ್ನು ನವಂಬರ್ ೧೫ರೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದ್ದಾರೆ.

ಸಹಕಾರ ಸಂಘಗಳ ಚುನಾವಣೆಯನ್ನು ತಕ್ಷಣವೇ ನಡೆಸಲು ರಾಜ್ಯ ಹೈಕೋರ್ಟ್ ಸಹಕಾರ ಸಂಘಗಳ ಚುನಾವಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತ್ತು. ಒಂದು ವೇಳೆ ಸಹಕಾರ ಸಂಘಗಳ ಅಧಿಕಾರದ ಅವಧಿ ಪೂರ್ಣವಾಗಿದ್ದರೆ ಚುನಾವಣಾ ಪ್ರಕ್ರಿಯೆಯನ್ನು ಮರು ಆರಂಭಿಸುವಂತೆಯೂ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ ೧೫ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಆಯುಕ್ತರು ಸೂಚನೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.