Breaking News

ಅತಿವೃಷ್ಠಿ/ಪ್ರವಾಹ ಪೀಡಿತ ಪ್ರದೇಶವಾಗಿ ಪುತ್ತೂರು, ಕಡಬ ತಾಲೂಕು ಘೋಷಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2020ನೇ ಸಾಲಿನ ಮುಂಗಾರು ಋತುವಿನ ಅಗಸ್ಟ್ ಮಾಹೆಯಲ್ಲಿ ರಾಜ್ಯದ ೨೩ ಜಿಲ್ಲೆಗಳ ೧೩೦ ತಾಲೂಕುಗಳನ್ನು ಅತಿವೃಷ್ಠಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ ೬ ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.

೨೦೨೦ ರ ಮುಂಗಾರು ಋತುವಿನ ಅಗಸ್ಟ್ ಮಾಹೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಮತ್ತು ಅಪಾರ ಪ್ರಮಾಣದಲ್ಲಿ ಜೀವಹಾನಿ, ಮನೆ ಹಾನಿ, ಬೆಳೆ ಹಾನಿ ಮತ್ತು ಸಾರ್ವಜನಿಕ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ ೨೩ ಜಿಲ್ಲೆಗಳ ೧೩೦ ತಾಲೂಕುಗಳಲ್ಲಿ ಅತಿವೃಷ್ಠಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದೆ. ರಾಜ್ಯ ಸರಕಾರವು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ಅಗಸ್ಟ್ ೨೦೨೦ರ ಮಾಹೆಯಲ್ಲಿ ಅತಿವೃಷ್ಠಿ/ಪ್ರವಾಹ ಎದುರಿಸಿದ ೨೩ ಜಿಲ್ಲೆಗಳ ೧೩೦ ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಮಂಗಳೂರು, ಮೂಡಬಿದಿರೆ, ಪುತ್ತೂರನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಅತಿವೃಷ್ಟಿ / ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್ / ಎನ್‌ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರಕಾರದ ಆದೇಶ/ ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸರಕಾರವು ಆದೇಶಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.