ನಿಡ್ಪಳ್ಳಿಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬಿಜೆಪಿ ಗ್ರಾಮ ಸಮಿತಿ ನಿಡ್ಪಳ್ಳಿ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ನಿಡ್ಪಳ್ಳಿ ಇದರ ಜಂಟಿ ಆಶ್ರಯದಲ್ಲಿ ಭಾರತ ಸರ್ಕಾರದ ಮಹತ್ವಕಾಂಕ್ಷಿ ಆರೋಗ್ಯ ರಕ್ಷಣಾ ಯೋಜನೆಯಾದ ಆಯುಷ್ಮಾನ್ ಕಾರ್ಡ್‌ನ ಉಚಿತ ನೋಂದಣಿ ಮತ್ತು ವಿತರಣೆಯು ಸೆ.೧೨ರಂದು ನಿಡ್ಪಳ್ಳಿಯಲ್ಲಿರುವ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶಾಖಾ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ, ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. ತಾ. ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸದಸ್ಯರಾದ ಮೀನಾಕ್ಷಿ ಮಂಜುನಾಥ್, ಹರೀಶ್ ಬಿಜಾತ್ರೆ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ನಿತೀಶ್ ಕುಮಾರ್ ಶಾಂತಿವನ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್.ಸಿ.ನಾರಾಯಣ, ಬಿಜೆಪಿ ಪ್ರಮುಖರಾದ ಪ್ರಕಾಶ್ ಬೋರ್ಕರ್, ವೆಂಕಟರಮಣ ಬೋರ್ಕರ್ ಮತ್ತು ಕಾರ್ಯಕರ್ತರು, ಫಲಾನುಭವಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.