ಪುತ್ತೂರು ಕಾಂಗ್ರೆಸ್ ಕಛೇರಿಗೆ ಸಲೀಂ ಅಹಮ್ಮದ್ ಭೇಟಿ | ಆರೋಗ್ಯ ಹಸ್ತ, ಸಂಘಟನೆ ಬಗ್ಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಳೆದ ಆರು ತಿಂಗಳುಗಳಿಂದ ಕೋವಿಡ್೧೯ ವಿರುದ್ದ ಕಾಂಗ್ರೆಸ್ ಪಕ್ಷವು ನಿತ್ಯ ನಿರಂತರವಾಗಿ ಕೆಲಸ ಮಾಡುತ್ತಾ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬಿಜೆಪಿ ಸರಕಾರ ಮಾಡದ ಕೆಲಸ ಕಾರ್ಯಗಳನ್ನು ಮಾಡುತ್ತಾ ಜನರ ಭಾವನೆಗಳಿಗೆ ಸ್ಪಂದಿಸುತ್ತಾ ಬಂದಿದೆ ಕರ್ನಾಟಕ ಪ್ರದೇಶ ಎಂದು ಕರ್ನಾಟಕ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ರವರು ಹೇಳಿದರು.

ಅವರು ಸೆ.೧೨ರಂದು ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ಆರೋಗ್ಯ ಹಸ್ತ ಹಾಗೂ ಸಂಘಟನೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮತನಾಡಿದರು.

ಪುತ್ತೂರಿಗೆ ಬರುತ್ತಿರುವುದು ಸಂತಸ ತಂದಿದೆ: ನಾನು ಹಲವಾರು ವರ್ಷಗಳ ಹಿಂದೆ ಪುತ್ತೂರಿಗೆ ಬಂದಿದ್ದೆ. ಇಲ್ಲಿನ ಆಗಿನ ಹಲವಾರು ಕಾಂಗ್ರೆಸ್‌ನ ನಾಯಕರು, ಕಾರ್ಯಕರ್ತರೊಂದಿಗೆ ಬೆಳೆದಿದ್ದೆ. ಇಲ್ಲಿನ ಉಷಾ ಹೊಟೇಲ್‌ನಲ್ಲಿ ನಾನು ತಂಗುತ್ತಿದ್ದೆ ಎಂದ ಅವರು ಇದೀಗ ನಾನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮತ್ತೆ ಪುತ್ತೂರಿಗೆ ಬಂದಿರುವುದು ಸಂತಸ ತಂದಿರುವುದಾಗಿ ಸಲೀಮ ಅಹಮ್ಮದ್ ಹೇಳಿದರು.

ಪ್ರೋಜೆಕ್ಟರ್ ಮೂಲಕ ಆರೋಗ್ಯ ಹಸ್ತ ಕಾರ್ಯಕ್ರಮ ವೀಕ್ಷಿಸಿದ ಸಲೀಂ ಅಹಮ್ಮದ್: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವ ಕುಮಾರ್‌ರವರ ಪದಗ್ರಹಣ ಕಾರ್ಯಕ್ರಮವು ರಾಜ್ಯಾದ್ಯಂತ ಏಕ ಕಾಲದಲ್ಲಿ ನಡೆದಾಗ ಪುತ್ತೂರಿನ ವಿವಿಧ ಕಡೆ ಹಮ್ಮಿಕೊಂಡ ಕಾರ್ಯಕ್ರಮ ಹಾಗೂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯಾಧ್ಯಂತ ನಡೆಯುತ್ತಿರುವ ಆರೋಗ್ಯ ಹಸ್ತ ಕಾರ್ಯಕ್ರಮ ಪುತ್ತೂರಿನಲ್ಲಿಯೂ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಗಳನ್ನು ಕಾರ್ಯಕ್ರಮದಲ್ಲಿ ಎಲ್‌ಸಿಡಿ ಪ್ರೋಜೆಕ್ಟರ್ ಮೂಲಕ ಪ್ರದರ್ಶಿಸಲಾಗಿದ್ದು ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸಹಿತ ರಾಜ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವೀಕ್ಷಕಿಸಿದ್ದು ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಕುರಿತು ಸಲೀಂ ಅಹಮ್ಮದ್ ಮೆಚ್ಚುಗೆ ವ್ಯಕ್ತಪಡಿಸಿದರು.

 

ಸನ್ಮಾನ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡು ಪುತ್ತೂರು ಕಾಂಗ್ರೆಸ್ ಕಚೇರಿಗೆ ಪ್ರಥಮ ಬಾರಿಗೆ ಆಗಮಿಸಿದ ಸಲೀಂ ಆಹಮ್ಮದ್‌ರವರನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಪರವಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿಯವರು ಸಲೀಂ ಅಹಮ್ಮದ್‌ರವರನ್ನು ಶಾಲು ಹೊದಿಸಿ, ಹಾರಾರ್ಪಣೆ ಮಾಡಿ ಫಲಪುಷ್ಟ ನೀಡಿ ಸನ್ಮಾನಿಸಿದರು. ಸಲೀಂ ಅಹಮ್ಮದ್‌ರವರ ಒಡನಾಡಿಯಾಗಿದ್ದ ಹಾಗೂ ಆತ್ಮೀಯರಾಗಿರುವ ಪುತ್ತೂರು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡೋಲ್ಫಿ ಎ.ರೇಗೋ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ವಿಜಯ ಕುಮಾರ್ ಸೊರಕೆಯವರು ಹಾರಾರ್ಪಣೆ ಮಾಡಿ ಸನ್ಮಾನಿಸಿದರು.

ಆರೋಗ್ಯ ಹಸ್ತ ವಾರಿಯರ್ಸ್ ಗೆ ಸನ್ಮಾನ: ಪುತ್ತೂರು ವಿಧಾನ ಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್‌ನಿಂದ ನಡೆಯುತ್ತಿರುವ ಆರೋಗ್ಯ ಹಸ್ತ ಕಾರ್ಯಕ್ರಮದಡಿಯಲ್ಲಿ ನಗರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿರುವ ಕೇಶವ ಪಡೀಲ್, ಆರೋಗ್ಯ ಹಸ್ತ ವಾರಿಯರ್‍ಸ್ ಪರವಾಗಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸನ್ಮಾನಿಸಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸ್ವಾಗತಿಸಿ, ಕಾರ್ಯಾಧ್ಯಕ್ಷ ಸಲಿಂ ಅಹಮ್ಮದ್‌ರವರ ಪರಿಚಯಿಸಿ, ಕಳೆದ ಹಲವಾರು ವರ್ಷಗಳಿಂದ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಎ.ವಿ ಮೋಹನ್, ಪುತ್ತೂರು ಕಾಂಗ್ರೆಸ್ ಉಸ್ತುವಾರಿ ವೆಂಕಟೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ, ಕಾರ್ಯದರ್ಶಿ, ಜಿ.ಪಂ ಸದಸ್ಯ ಎಂ.ಎಸ್ ಮಹಮ್ಮದ್, ಸುಳ್ಯ ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕೆಪಿಸಿಸಿ ಸದಸ್ಯ ಎಂ.ಬಿ ವಿಶ್ವನಾಥ ರೈ, ಭರತ್ ಮುಂಡೋಡಿ, ನಝೀರ್ ಮಠ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.‌


ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೋಡಿಂಬಾಳ, ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕಾಂಗ್ರೆಸ್ ವಕ್ತಾರ ಕುಂಬ್ರ ದುರ್ಗಾಪ್ರಸಾದ್ ರೈ, ರಾಜ್ಯ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ನೂರುದ್ದೀನ್ ಸಾಲ್ಮರ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಾಕೂಬ್ ಹಾಜಿ ದರ್ಬೆ, ಕಾಂಗ್ರೆಸ್ ಮುಂಡೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಮುಲಾರ್, ಕಾಂಗ್ರೆಸ್ ಕಾರ್ಮಿಕ ಘಟಕದ ಶಿವನಾಥ ರೈ ಮೇಗಿನಗುತ್ತು, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಮಾಜಿ ಸದಸ್ಯ ರಾಮ ಮೇನಾಲ, ಅಶೋಕ್ ಕುಮಾರ್ ಸಂಪ್ಯ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ರೋಷನ್ ರೈ ಬನ್ನೂರು, ಶಶಿಧರ ಎಸ್.ಡಿ ಸರ್ವೆ, ಆದಂ ಕಲ್ಲರ್ಪೆ, ಸನಂ ನಝೀರ್, ನರಿಮೊಗರು ಗ್ರಾ.ಪಂ ಮಾಜಿ ಅಧ್ಯಕ್ಷ ಚಂದ್ರಾವತಿ, ನೆಬಿಸಾ ಅಬೂಬಕ್ಕರ್, ಗುಣಶೇಖರ ರೈ ಊರಮಾಲ್, ಇಸ್ಮಾಯಿಲ್ ಗಟ್ಟಮನೆ, ಹಾಜಿ ಮುಹಮ್ಮದ್ ಕುಂಞಿ ಮುಕ್ವೆ, ಗಂಗಾಧರ ಶೆಟ್ಟಿ ಎಲಿಕ, ಮನಮೋಹನ ರೈ, ನಿಝಾಮ್ ಡ್ರೈವರ್, ಕೊಳ್ತಿಗೆ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಕುಮಾರ್ ರೈ, ವಿಕ್ಟರ್ ಪಾಯಿಸ್, ಹರೀಶ್ ಕುಮಾರ್ ನಿಡ್ಪಳ್ಳಿ, ಬಡಗನ್ನೂರು ಗ್ರಾ.ಪಂ ಮಾಜಿ ಗುರುಪ್ರಸಾದ್ ರೈ ಕುದ್ಕಾಡಿ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಬಿ ಅಮರನಥ ಗೌಡ ಬಪ್ಪಳಿಗೆ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಬಿ.ಕೆ ಅಬ್ದುಲ್ ರಹಿಮಾನ್, ಹಮೀದ್ ಬಡಗನ್ನೂರು, ರಾಮ ನಾಯ್ಕ ಪಾಣಾಜೆ, ಸಲಾಂ ಸಂಪ್ಯ, ಸುಭಾಸ್ ರೈ ಬೆಳ್ಳಿಪ್ಪಾಡಿ, ಸಿರಾಜ್ ಸಾಮೆತ್ತಡ್ಕ, ಇಬ್ರಾಹಿಂ ಸಂಪ್ಯ, ಇಸ್ಮಾಯಿಲ್ ಬಡಗನ್ನೂರು, ರಝಾಕ್ ಆರ್.ಪಿ ಪಡೀಲ್, ಸುದರ್ಶನ್ ಕುದುಂಬ್ಲಾಡಿ, ಕೇಶವ, ಸತೀಶ್, ಶರತ್, ಸಂದೀಪ್, ಅಕ್ಷಯ್ ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಕೃಷ್ಣಪ್ರಸಾದ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.