ನಿಡ್ಪಳ್ಳಿ; ಬಿ.ಜೆ.ಪಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
ನಿಡ್ಪಳ್ಳಿ; ಗ್ರಾಮೀಣ ಪ್ರದೇಶದ ಮೂಲೆ ಮೂಲೆಗಳ ಬಡ ಜನರಿಗೆ ಆಯುಷ್ಮಾನ್ ಕಾರ್ಡ್ ಸಿಗ ಬೇಕೆಂಬ ನಿಟ್ಟಿನಲ್ಲಿ  ಬಿ.ಜೆ.ಪಿ ಮತ್ತು ಸಂಘ ಪರಿವಾರಗಳು ಉಚಿತವಾಗಿ ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ನಿಡ್ಪಳ್ಳಿ ಗ್ರಾಮ ಬಿ.ಜೆ.ಪಿ ಪಕ್ಷದ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಕಾರ್ಯಕ್ರಮವನ್ನು ಸೆ.12 ರಂದು ವಿಜಯನಗರದ ಪಾಣಾಜೆ ಸಿ.ಎ. ಬ್ಯಾಂಕ್ ವಠಾರದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರದ  ಮಹತ್ತ್ವಾಕಾಂಕ್ಷಿ ಯೋಜನೆಯಾದ ಈ ಕಾರ್ಯಕ್ರಮದಲ್ಲಿ ಹೆಚ್ಚು ಜನರು ಭಾಗವಹಿಸಿ ಇದರ ಪ್ರಯೋಜನ ಪಡೆದು ಕೊಳ್ಳುವಂತೆ ತಿಳಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಆಯುಷ್ಮಾನ್ ಯೋಜನೆಯಲ್ಲಿ  ಜನರಿಗೆ ಸಿಗುವ ಆರೋಗ್ಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ತಾಲೂಕು ಪಂಚಾಯತ್ ಸದಸ್ಯರಾದ ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ, ಬಿ.ಜೆ.ಪಿ ಹಿಂದುಳಿದ ವರ್ಗ ಸಮಿತಿಯ ಜಿಲ್ಲಾಧ್ಯಕ್ಷ ಅರ್.ಸಿ.ನಾರಾಯಣ ರೆಂಜ,  ಪುತ್ತೂರು ಬಿ.ಜೆ.ಪಿ  ಗ್ರಾಮಾಂತರ  ಮಂಡಲ ಕಾರ್ಯದರ್ಶಿ ನಿತೀಶ್ ಶಾಂತಿವನ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘ ಪರಿವಾರದ ಗ್ರಾಮ ಸಮಿತಿ ಅಧ್ಯಕ್ಷ ಮುರಳೀಕೃಷ್ಣ ಮುಂಡೂರು ಸ್ವಾಗತಿಸಿ ವಂದಿಸಿದರು.ಪಕ್ಷದ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡರು. ಮುಂದೂಡಿದ ವಿತರಣಾ ಕಾರ್ಯಕ್ರಮ; ಇಡೀ ರಾಜ್ಯದಲ್ಲಿ ತಾಂತ್ರಿಕ ದೋಷ ಇದ್ದ ಕಾರಣ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿ  ನೋಂದಣಿ ಮತ್ತು ವಿತರಣೆಯನ್ನು ಮುಂದೂಡಲಾಯಿತು. ಮುಂದಿನ ದಿನವನ್ನು ತಿಳಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.