ಸೆ.21ರಿಂದ ಕಾಸರಗೋಡು-ಮಂಗಳೂರು ಬಸ್ ಸಂಚಾರ ಪುನರಾರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಕೊರೋನಾ ಕಾರಣಕ್ಕಾಗಿ ಕಳೆದ ಸುಮಾರು ಆರು ತಿಂಗಳಿನಿಂದ ಸ್ಥಗಿತಗೊಂಡಿದ್ದ, ಕಾಸರಗೋಡು- ಮಂಗಳೂರು ನಡುವೆ ಅಂತರ್ರಾಜ್ಯ ಬಸ್ ಸಂಚಾರವನ್ನು ಸೆ.೨೧ರಿಂದ ಮತ್ತೆ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.

ದೇಶದಲ್ಲಿ ಕೊರೋನಾ ಸೋಂಕು ಪ್ರಮಾಣ ಏರಿಕೆಯಾಗುತ್ತಿದ್ದಂತೆ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಅಂದಿನಿಂದ ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಆರು ತಿಂಗಳ ಬಳಿಕ ಅಂತರ್ರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಹೊರಟದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಕರ್ನಾಟಕ ಕೆಎಸ್ಸಾರ್ಟಿಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಸೆ.೨೧ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್‌ನಲ್ಲಿ ತಲಾ ೪೦ ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್‌ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.ಮೊದಲ ಹಂತದಲ್ಲಿ ಕಾಸರಗೋಡು- ಮಂಗಳೂರು, ಕಾಸರಗೋಡು- ಪಂಜಿಕಲ್ಲು ರೂಟ್‌ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.ಲಾಕ್‌ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್‌ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆಎಸ್ಸಾರ್ಟಿಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.