ಇಚ್ಲಂಪಾಡಿ: ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ, ಕೋವಿಡ್ ವಾರಿಯರ್ಸ್‌ಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

 ನೆಲ್ಯಾಡಿ: 2019-20ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ಕೋವಿಡ್ ವಾರಿಯರ್ಸ್‌ಗೆ ಸನ್ಮಾನ ಕಾರ್ಯಕ್ರಮ ಸೆ.14ರಂದು ಇಚ್ಲಂಪಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ 20 ವಿದ್ಯಾರ್ಥಿಗಳಿಗೆ ಹಾಗೂ ಕೋವಿಡ್ ವಾರಿಯರ್ಸ್‌ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮರವರ ನೇತೃತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮ ನಡೆಯಿತು. ಜಿ.ಪಂ.ಸದಸ್ಯ ಸರ್ವೋತ್ತಮ ಗೌಡರವರು ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಇಚ್ಲಂಪಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಾಂತರಾಮ ಕುಡಾಲ, ಮುಖ್ಯ ಶಿಕ್ಷಕಿ ಶಾಂತಿ, ಶಿಕ್ಷಕರಾದ ಗಿರೀಶ್, ಕೌಕ್ರಾಡಿ ಗ್ರಾ.ಪಂ.ಮಾಜಿ ಸದಸ್ಯರಾದ ಮಾಧವ, ವರ್ಗೀಸ್ ಅಬ್ರಹಾಂ, ಯಮುನಾ, ಅಂಗನವಾಡಿ ಶಿಕ್ಷಕಿ ತಂಗಮ್ಮ ಉಪಸ್ಥಿತರಿದ್ದರು. ಶಿಕ್ಷಕಿ ಜ್ಯೋತಿ ನಿರೂಪಿಸಿದರು.

ಆಯುಷ್ಮನ್ ಕಾರ್ಡ್ ಅಭಿಯಾನ ಮುಂದೂಡಿಕೆ:
ಸನ್ಮಾನ ಕಾರ್ಯಕ್ರಮದ ಜೊತೆಗೆ ಆಯಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆಯೂ ಹಮ್ಮಿಕೊಳ್ಳಲಾಗಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದ ಇದು ಸಾಧ್ಯವಾಗಿಲ್ಲ. ಶೀಘ್ರದಲ್ಲೇ ಇಚ್ಲಂಪಾಡಿಯಲ್ಲಿ ಮತ್ತೆ ಆಯಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.