ಓಡ್ಲ: ಕಾರು, ರಿಕ್ಷಾ ಡಿಕ್ಕಿ-ಓವ೯ನಿಗೆ ಗಾಯ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರ ಸಮೀಪದ ಓಡ್ಲ ಎಂಬಲ್ಲಿ ಕಾರು ಹಾಗೂ ರಿಕ್ಷಾವೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಓವ೯ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೆ.೧೩ರಂದು ಮಧ್ಯಾಹ್ನ ಸಂಭವಿಸಿದೆ.

ಬಜತ್ತೂರು ಗ್ರಾಮದ ರೆಂಜತ್ತಡಿ ನಿವಾಸಿ ಅಶೋಕ(೫೪ವ.) ಎಂಬವರು ಗಾಯಗೊಂಡವರಾಗಿದ್ದಾರೆ. ಕಡಬ ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಕಾರು(ಕೆಎ೧೯ ಎಸಿ ೭೮೬೩) ಹಾಗೂ ಉಪ್ಪಿನಂಗಡಿಯಿಂದ ಆತೂರು ಕಡೆಗೆ ಹೋಗುತ್ತಿದ್ದ ರಿಕ್ಷಾ (ಕೆಎ೨೧ಯು೧೨೨೭) ನಡುವೆ ಬಜತ್ತೂರು ಗ್ರಾಮದ ಕೆಮ್ಮಾರ ಸಮೀಪದ ಓಡ್ಲ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಅಶೋಕ್‌ರವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿದ್ದ ಇತರೇ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಕಾಂಚನ ನಿವಾಸಿ ಅವಿನಾಶ್ ಎಂಬವರು ನೀಡಿದ ದೂರಿನ ಮೇರೆಗೆ ಕಾರು ಚಾಲಕ ಅಬ್ದುಲ್ ರಶೀದ್ ಎಂಬವರ ವಿರುದ್ಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.