ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಸರಳವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈಯವರು ಪದವಿ ಶಿಕ್ಷಣವನ್ನು ಮುಗಿಸಿದ ನಂತರ ವಿದ್ಯಾರ್ಥಿಗಳಿಗಿರುವ ಅವಕಾಶಗಳ ಚಿತ್ರಣವನ್ನು ವಿದ್ಯಾರ್ಥಿಗಳ ಮುಂದಿಟ್ಟರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿಯವರು ವಿದ್ಯಾರ್ಥಿ ದೆಸೆಯಲ್ಲಿ ಪಡೆಯುವ ಅನುಭವಗಳು ಮುಂದಿನ ಜೀವನದಲ್ಲಿ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ಸವಿವರವಾಗಿ ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರಾಜಲಕ್ಷ್ಮೀ ಎಸ್ ರೈ, ಹಾಗೂ ಉಪಪ್ರಾಂಶುಪಾಲ ಶೇಷಗಿರಿ ಎಂ ಶುಭಹಾರೈಕೆಯ ಮಾತುಗಳನ್ನಾಡಿದರು. ಉಪನ್ಯಾಸಕಿ ಸುಮ ಎಸ್, ಉಪನ್ಯಾಸಕ ಶಿವಪ್ರಸಾದ್ ಕೆ ಆರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.