ಮುಂಡೂರು: ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ

ಪುತ್ತೂರು: ರಸ್ತೆ ಬದಿಯಲ್ಲಿ ನಡೆದು ಕೊಂಡು ಬರುತ್ತಿದ್ದ ಮಹಿಳೆಯೊಬ್ಬರಿಗೆ ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ಮುಂಡೂರು ಗ್ರಾಮದ ಪಂಜಳದಲ್ಲಿ ಸೆ.15ರಂದು ನಡೆದಿದೆ.

 

ಪಂಜಳ ನಿವಾಸಿ ರಾಮ ನಾಯ್ಕ ಅವರ ಪತ್ನಿ ಚಂದ್ರಾವತಿ(65 ವ)ರವರು ಗಾಯಾಳು. ಅವರು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಫಾರೂಕ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಚಾಲಕನ ಹತೋಟಿ ತಪ್ಪಿ ಚಂದ್ರಾವತಿ ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಂದ್ರಾವತಿ ಅವರು ಗಾಯಗೊಂಡಿದ್ದು, ಅವರನ್ನು ಅದೇ ರಿಕ್ಷಾ ಚಾಲಕ ಫಾರೂಕ್ ಅವರು ಉಪಚರಿಸಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.