ಕೆಯ್ಯೂರು: ದುರ್ಗಾ ಸ್ಪೋರ್ಟ್ಸ್ ಕ್ಲಬ್, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಿಂದ ಆಯುಷ್ಮಾನ್ ಕಾರ್ಡ್ ಉಚಿತ ನೋಂದಣಿ, ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಯ್ಯೂರು ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಮತ್ತು ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಆರೋಗ್ಯ ರಕ್ಷಣಾ ಯೋಜನೆಯಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ಉಚಿತ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ಸೆ.೧೭ ರಂದು ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೆಯ್ಯೂರು ಕೆದಂಬಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಶಶಿಧರ್ ರಾವ್ ಬೊಳಿಕ್ಕಲರವರು ಉದ್ಘಾಟಿಸಿ ಮಾತನಾಡಿ, ಆಯುಷ್ಮಾನ್ ಕಾರ್ಡ್ ಯೋಜನೆ ಕೇಂದ್ರ ಸರಕಾರದ ಮಹತ್ವದ ಯೋಜನೆಯಾಗಿದೆ. ಇದು ಜನತೆಗೆ ಸಂಜೀವಿನಿ ಇದ್ದ ಹಾಗೆ. ಪ್ರತಿಯೊಬ್ಬರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಶಶಿಧರ್ ರಾವ್ ಕಾರ್ಯಕ್ರಮ ಉದ್ಘಾಟನೆ

ಆಯುಷ್ಮಾನ್ ಕಾರ್ಡ್ ವಿತರಿಸಿದ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳಜ್ಜರವರು ಮಾತನಾಡಿ, ಕೆಯ್ಯೂರಿನ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಒಂದು ಉತ್ತಮ ಕೆಲಸವನ್ನು ಮಾಡಿದೆ. ಜನರಿಗೆ ಆರೋಗ್ಯ ಮುಖ್ಯ. ಅನಾರೋಗ್ಯ ಉಂಟಾದಾಗ ಅದಕ್ಕೆ ಚಿಕಿತ್ಸೆ ಮುಖ್ಯ. ಈ ನಿಟ್ಟಿನಲ್ಲಿ ಜನರಿಗೆ ಅತೀ ಅಗತ್ಯವಾದ ಆಯುಷ್ಮಾನ್ ಕಾರ್ಡ್ ಅನ್ನು ಕೇಂದ್ರ ಸರಕಾರ ತಂದಿದೆ. ಇಂತಹ ಕಾರ್ಡ್ ಅನ್ನು ಪ್ರತಿಯೊಬ್ಬರು ಉಚಿತವಾಗಿ ಪಡೆದುಕೊಳ್ಳುವ ವ್ಯವಸ್ಥೆಯನ್ನು ಸಂಘಟಕರು ಮಾಡಿದ್ದಾರೆ. ಸಂಘದಿಂದ ಇನ್ನಷ್ಟು ಒಳ್ಳೆಯ ಕೆಲಸಗಳು ಮೂಡಿಬರಲಿ ಎಂದು ಹೇಳಿ ಶುಭ ಹಾರೈಸಿದರು. ಅತಿಥಿಯಾಗಿದ್ದ ತಾಪಂ ಸದಸ್ಯೆ ಭವಾನಿ ಚಿದಾನಂದ್ ಮಾತನಾಡಿ, ಕೇಂದ್ರ ಸರಕಾರದ ಯೋಜನೆಗಳು ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕಾದರೆ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದು ಈ ನಿಟ್ಟಿನಲ್ಲಿ ಗ್ರಾಮ ಮಟ್ಟದ ಸಂಘಟನೆಯಿಂದ ಒಂದು ಕೆಲಸ ಆಗಿದೆ ಎಂದು ಹೇಳಿದರು. ಕೆಯ್ಯೂರು ಶಾಖೆಯ ಶಾಖಾ ಪ್ರಬಂಧಕ ಸದಾಶಿವ ಭಟ್ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ದಿನೇಶ್ ಕೆ.ಎಸ್.ವಾಸುಕಿ ಉಪಸ್ಥಿತರಿದ್ದರು.

ಎಸ್.ಬಿ.ಜಯರಾಮ ರೈ ಕಾರ್ಡ್ ವಿತರಣೆ

ಕ್ಲಬ್‌ನ ಸ್ಥಾಪಕಾಧ್ಯಕ್ಷ ರಾಧಾಕೃಷ್ಣ ರೈ ಸಣಂಗಳ ಸ್ವಾಗತಿಸಿದರು. ಸತೀಶ್ ರೈ ಕೆಯ್ಯೂರು, ಗೋಪಾಕೃಷ್ಣ ಮಾಡಾವು, ಶರತ್ ಕುಮಾರ್ ಮಾಡಾವು, ನಿರುಪಮ, ಪಿ.ವೈ ಮೊಹಮ್ಮದ್ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು.  ಶರತ್ ಕುಮಾರ್ ದೇರ್ಲ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.