HomePage_Banner
HomePage_Banner
HomePage_Banner

ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಿಗೆ ಇನ್‌ಸ್ಪಾಯರ್ ಅವಾರ್ಡ್ ಮಾನಕ್ ಕಾರ್ಯಾಗಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇವರು ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸೆ. ೧೫ರಂದು ಪುತ್ತೂರು ತಾಲೂಕಿನ ವಿಜ್ಞಾನ ಶಿಕ್ಷಕರಿಗೆ Inspire Award Manak ಒಂದು ದಿನದ ಕಾರ್ಯಾಗಾರವನ್ನು ನಡೆಸಿಕೊಟ್ಟರು. ತಾಲೂಕಿನ ಆಯ್ದ ಐವತ್ತು ವಿಜ್ಞಾನ ಶಿಕ್ಷಕರು ಭಾಗವಹಿಸಿ ತಮ್ಮದೇ ಆದ ಯೋಜನೆಗಳಿಗೆ ಪೂರಕವಾದ ಮಾಹಿತಿಯನ್ನು ಪಡೆದುಕೊಂಡರು. ತಾಲೂಕಿನ ವಿಜ್ಞಾನ ಆಸಕ್ತ ವಿದ್ಯಾರ್ಥಿಗಳು ATL ನ ಪ್ರಯೋಜನವನ್ನು ಪಡೆದು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವೈಜ್ಞಾನಿಕ ಮಾದರಿ ಮತ್ತು ಪ್ರಬಂಧಗಳನ್ನು ಮಂಡಿಸುವಂತಾಗಲಿ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು ಶುಭ ಹಾರೈಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಓಬಳೇಶ್ ಹಾಗೂ ಹಾರಾಡಿ ಸಮೂಹ ಸಂಪನ್ಮೂಲ ವ್ಯಕ್ತಿ ಸ್ಟಾನಿ ಪ್ರವೀಣ್ ಮಸ್ಕರೇನಸ್ ಶುಭ ನುಡಿಗಳನ್ನಾಡಿದರು. ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆಗೈಯ್ದು “ಇಂಜಿನಿಯರ್ಸ್ ಡೇ” ಯನ್ನು ಆಚರಿಸಲಾಯಿತು. ಎಲ್ಲಾ ಸಂಸ್ಥೆಗಳಿಂದಲೂ ಪುಟ್ಟ ವಿಜ್ಞಾನಿಗಳು ಮೂಡಿಬರಲಿ; ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುವಂತಾಗಲಿ ಎಂದು ಶಾಲಾ ಮುಖ್ಯಗುರು ರೂಪಕಲಾ ಶುಭ ಹಾರೈಸಿದರು.

Vitwara Startup Group‌ Mangalore  ಇದರ ತಾಂತ್ರಿಕ ಸಹಾಯಕರಾದ ಯೋಗೀಶ್, ಮನೋಜ್ ಮತ್ತು ಧನುಷ್ ಶಿಕ್ಷಕರಿಗೆ ಪೂರಕ ಮಾಹಿತಿ ನೀಡಿದರು. ಹಿರಿಯ ವಿಜ್ಞಾನ ಶಿಕ್ಷಕಿ ಜಯಲಕ್ಷ್ಮಿ ಎ ಸ್ವಾಗತಿಸಿ, ಶಿಕ್ಷಕಿ ಸುನೀತಾರವರು ವಂದಿಸಿದರು. ಶಿಕ್ಷಕಿ ಅಕ್ಷತಾ ಜೈನ್‌ರವರು ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.