HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಪ್ರಧಾನಿ ಮೋದಿಯವರ ಹುಟ್ಟು ಹಬ್ಬ ಕಡಬ ಬಿಜೆಪಿ ಯುವ ಮೋರ್ಚಾದಿಂದ ಆಸ್ಪತ್ರೆಗಳಿಗೆ ಹಣ್ಣು ಹಂಪಲು ವಿತರಣೆ

Puttur_Advt_NewsUnder_1
Puttur_Advt_NewsUnder_1

ಕಡಬ:ಬಿಜೆಪಿ ಮಹಾಶಕ್ತಿ ಕೇಂದ್ರದ ಕಡಬ ಬಿಜೆಪಿ ಯುವ ಮೋರ್ಚಾದ ವತಿಯಿಂದ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 70ನೇ ಹುಟ್ಟುಹಬ್ಬದ ಪ್ರಯುಕ್ತ ಕಡಬದ ಆಸ್ಪತ್ರೆ ಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಮತ್ತುವರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಕಡಬದ ಹಿರಿಯ ವೈದ್ಯ ಡಾ. ಸಿ.ಕೆ ಶಾಸ್ತ್ರೀ ಅವರನ್ನು ಹಾಗೂ ಅಲ್ಲಿನ ಸಿಬ್ಬಂದಿ ವರ್ಗದವರನ್ನು ಹಣ್ಣು ಹಂಪಲು ನೀಡಿ ಗೌರವಿಸಲಾಯಿತು ಮತ್ತು ಅಲ್ಲಿದ್ದ ರೋಗಿಗಳಿಗೆ ಹಣ್ಣು ಹಂಪಲು ನೀಡಲಾಯಿತು.

ಅಲ್ಲದೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು ಹಣ್ಣು ಹಂಪಲು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಭಾರತೀಯ ಜನತಾ ಪಾರ್ಟಿಯ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸೀತಾರಾಮ ಗೌಡ ಹೊಸವಳಿಕೆ, ಮನೋಹರ ರೈ, ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್, ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಿರೀಶ್ ಎ.ಪಿ, ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಮನುದೇವ್ ಪರಮಲೆ, ಸದಸ್ಯರಾದ ಹರ್ಷಿತ್ ಬಿಳಿನೆಲೆ, ನಿತೀಶ್ ಗೌಡ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.