HomePage_Banner
HomePage_Banner

153.10 ಕಿ.ಮೀ ಗ್ರಾಮೀಣ ರಸ್ತೆಗಳು ಜಿಲ್ಲಾ ಮುಖ್ಯರಸ್ತೆಯಾಗಿ ಮೇಲ್ದರ್ಜೆಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
 • ಲೋಕೋಪಯೋಗಿ ಇಲಾಖೆಯ ರಸ್ತೆಗಳು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೆ – ಸಂಜೀವ ಮಠಂದೂರು

ಪುತ್ತೂರು: ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ತಾಲೂಕಿನಲ್ಲಿ ೧೧೨.೫೦ ಕಿ.ಮೀ. ಮತ್ತು ಬಂಟ್ವಾಳ ತಾಲೂಕಿನ ೪೦.೬೦ ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯರಸ್ತೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಅದೇ ರೀತಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆಗಳನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲ್ಪಟ್ಟಿವೆ ಎಂದು ಶಾಸಕ ಸಂಜೀವ ಮಠಂದೂರು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರು ತಾನು ಸಲ್ಲಿಸಿದ ಪ್ರಸ್ತಾವನೆಗೆ ಅನುಮದನೆ ನೀಡಿ ಗ್ರಾಮೀಣ ಮತ್ತು ಜಿಲ್ಲಾ ಮುಖ್ಯರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ ಎಂದರು. ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆಗಳನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲ್ಪಟ್ಟಿವೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ಗುರುವಾಯನ್‌ಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಗೆ ಸಂಪರ್ಕಿಸಲಾಗುತ್ತದೆ. ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ. ಅದೇ ರೀತಿ ನಿಂತಿಕಲ್ಲು-ಬೆಳ್ಳಾರೆ-ನೆಟ್ಟಾರು-ಅಮ್ಚಿನಡ್ಕ-ಕಾವು-ಈಶ್ವರಮಂಗಲ-ಪಳ್ಳತ್ತೂರು ರಸ್ತೆ, ಹಿರೇಬಂಡಾಡಿ-ಕೊಲ-ಪಟ್ರಮೆ-ಧರ್ಮಸ್ಥಳ ರಸ್ತೆಯು ನಿರ್ಮಾಣವಾಗಲಿದೆ ಎಂದರು.

ರೂ.೧.೫೫ ಕೋಟಿ ವೆಚ್ಚದಲ್ಲಿ ಮುಗೇರಡ್ಕ ಸೇತುವೆ ದುರಸ್ಥಿ:
ಪುತ್ತೂರು ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸುವ ಮುಗೆರಡ್ಕ ತೂಗುಸೇತುವೆಯು ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಹಾನಿಯಾಗಿದ್ದು ಈ ತೂಗುಸೇತುವೆಯನ್ನು ರೂ. ೧.೫೫ ಕೋಟಿ ವೆಚ್ಚದಲ್ಲಿ ದುರಸ್ಥಿ ಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ೩೨ ಶಾಲಾ ಸಂಪರ್ಕ ರಸ್ತೆಗಳಿಗೆ ಕಿರುಸೇತುವೆಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಮತದಾರದ ವಿಶ್ವಾಸದಿಂದ ಅಭಿವೃದ್ಧಿ ಕೆಲಸ:
ಸಂಜೀವ ಮಠಂದೂರು ಯಾವುದೇ ಒಂದು ಗ್ರಾಮಕ್ಕೆ ಮೀಸಲಾದ ಶಾಸಕನಲ್ಲ. ಅಭಿವೃದ್ಧಿಯ ವಿಚಾರದಲ್ಲಿ ಪುತ್ತೂರು ಕ್ಷೇತ್ರವನ್ನು ಗಮನದಲ್ಲಿರಿಸಿಕೊಂಡು ಜಾತಿ-ಧರ್ಮ, ಪಕ್ಷ-ಬೇಧವಿಲ್ಲದೆ ಕೆಲಸ ಮಾಡುವ ಎಲ್ಲರ ಶಾಸಕರನಾಗಿ ಸೇವೆ ಮಾಡುತ್ತಿದ್ದೇನೆ. ನಾನು ೨ ವರ್ಷ ೨ ತಿಂಗಳು ಕಳೆದಿದೆ. ೧ ವರ್ಷ ೨ ತಿಂಗಳಿನಿಂದ ಆಡಳಿತ ಪಕ್ಷದ ಶಾಸಕನಾಗಿದ್ದೇನೆ. ನಾನು ಅಭಿವೃದ್ಧಿಯ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ. ರಾಜಕೀಯ ಪ್ರೇರಿತ ಅಪಪ್ರಚಾರಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಮತದಾರರ ವಿಶ್ವಾಸದೊಂದಿಗೆ ಕೆಲಸ ಮಾಡುತ್ತಿದ್ದೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ತಾಲೂಕು ಪಂಚಾಯತ್ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ಪುತ್ತೂರು ಲೋಕೋಪಯೋಗಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಂ ಉಪಸ್ಥಿತರಿದ್ದರು.

About The Author

Related posts

3 Comments

 1. Chethan

  Puttur nagara sabha vyapti ya kunjoor shri durga parameshwari temple na road estu varsha adru repair agilla
  Nagara sabha vyapti ge sedha road hegidhe omme nodi
  Navu grama vyapti ge adru seridre ondhu road sigthittu

  Reply
 2. Chethan

  Puttur nagara sabha vyapti ya kunjoor shri durga parameshwari temple na road estu varsha adru repair agilla
  Nagara sabha vyapti ge seridha road hegidhe omme nodi
  Navu grama vyapti ge adru seridre ondhu road sigthittu
  Namma manavi mla avarige thilisuva ondhu prayatna madi pls

  Reply

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.