HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ: ಎನ್‌ಎಸ್‌ಎಸ್ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
  • ಮಾದಕ ವಸ್ತುವಿನ ದುಷ್ಪರಿಣಾಮದ ಬಗ್ಗೆ ಅರಿವು ಅಗತ್ಯ: ಗೋಪಾಲ ಗೌಡ

ಬೆಟ್ಟಂಪಾಡಿ: ಯುವ ಸಮುದಾಯ ಮಾದಕ ವಸ್ತುವಿನ ಚಟಕ್ಕೆ ಒಳಗಾಗುತ್ತಿದ್ದು, ಇದನ್ನು ಆರಂಭದಲ್ಲಿಯೇ ತಡೆಯಲು ಮಾದಕ ವಸ್ತುವಿನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಾವಶ್ಯಕ ಎಂದು ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗೋಪಾಲ ಗೌಡ ಡಿ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ‘ಮಾದಕ ವಸ್ತು ವಿರೋಧಿ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಅಂಗವಾಗಿ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳು ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅರಿವು ಮೂಡಿಸುವ ಕೈಂಕರ್ಯಕ್ಕೆ ಚಾಲನೆ ಪಡೆದರು. ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಂಡು ಪ್ರಸರಣಗೊಳ್ಳಲಿರುವ ವಿವಿಧ ಸಂಚಿಕೆಗಳು ಕವನ, ಘೋಷವಾಕ್ಯ, ಚಿತ್ರಕಲೆ, ಚಿತ್ರಬರಹ, ಭಿತ್ತಿಪತ್ರ ಮತ್ತು ಸಣ್ಣಕಥೆಗಳನ್ನು ಒಳಗೊಂಡಿರುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತದೆ ಮತ್ತು ಅರ್ಥಪೂರ್ಣ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದದ ಶ್ರೀ ದಾಮೋದರ ಗೌಡ ಕೆ, ಡಾ. ದೇವರಾಜ ಆರ್, ಶ್ರೀ ಉದಯರಾಜ್ ಎಸ್, ಶ್ರೀ ಶ್ರೀಧರಮೂರ್ತಿ ಕೆ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಅಧಿಕಾರಿಯಾಗಿರುವ ಶ್ರೀ ಹರಿಪ್ರಸಾದ್ ಎಸ್ ಸ್ವಾಗತಿಸಿದರು ಮತ್ತು ಶ್ರೀ ಶಶಿಕುಮಾರ ವಂದಿಸಿದರು. ಸ್ವಯಂಸೇವಕಿ ರಂಜಿತಾ ಜಿ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.