HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಸೆ.28ರಂದು ರೈತ ಸಂಘದಿಂದ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭೂ ಸುಧಾರಣಾ ಕಾಯಿದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆಗಳ ತಿದ್ದುಪಡಿ ವಿರೋಧಿಸಿ ಸೆ.28ರಂದು ಪುತ್ತೂರು ಬಸ್ ನಿಲ್ದಾಣದ ಗಾಂಧಿ ಕಟ್ಟೆಯ ಬಳಿ ಪ್ರತಿಭಟನೆ, ರಸ್ತೆ ತಡೆ ನಡೆಸಲಾಗುವುದು ಎಂದು ಹೇಳಿದ ರೈತಸಂಘದ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ, ಪ್ರತಿಭಟನೆಗೆ ಬೆಂಬಲ ನೀಡುವಂತೆ ವಿವಿಧ ಸಂಘಟನೆಗಳಿಗೆ ಮನವಿ ಮಾಡುವುದಾಗಿ ಹೇಳಿದರು.


ಸೆ.25ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾದಂತಹ ಸಂಕಷ್ಟದಲ್ಲಿರುವಾಗ ತಮ್ಮ ಸರಕಾರ ಭೂ ಸುಧಾರಣೆ ಕಾಯ್ದೆ ಮತ್ತು ಎ.ಪಿ.ಎಂ.ಸಿ. ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ.ಇದರಿಂದಾಗಿ ದೇಶದ ಶೇಕಡಾ ೭೦ರಷ್ಟು ಇರುವ ರೈತರಿಗೆ ಈ ಕಾನೂನು ಮರಣ ಶಾಸನ ವಾಗಿರುತ್ತದೆ.ಕಾರ್ಪೋರೇಟ್ ಕಂಪೆನಿಗಳಿಗೆ ಹಸಿರು ಕಂಬಳಿ ಹಾಕಿ ಸ್ವಾಗತಿಸುತ್ತದೆ.ಕಾಯಿದೆ ತಿದ್ದುಪಡಿಯಿಂದ ರೈತರು ಭೂಮಿಯ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಸರಕಾರ ಅನ್ನ ಕೊಡುವ ರೈತನಿಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಅನ್ಯಾಯ ಮಾಡುತ್ತಿದೆ.ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿದ್ದರಿಂದ ಯಾರು ಬೇಕಾದರೂ ರೈತರ ಕೃಷಿ ಭೂಮಿಯನ್ನು ಅವಕಾಶವಿರುತ್ತದೆ. ಈ ಕಾಯಿದೆಯಿಂದ ಕಾರ್ಪೊರೇಟ್ ಕಂಪೆನಿಗಳು ಅಮಾಯಕ ರೈತರನ್ನು ಆಮಿಷವೊಡ್ಡಿ ಫಲವತ್ತಾದ ಕೃಷಿ ಭೂಮಿಯನ್ನು ಖರೀದಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವುದಕ್ಕೆ ಅವಕಾಶ ಒದಗಿಸುತ್ತದೆ.ಎ.ಪಿ.ಎಂ.ಸಿ.ಕಾಯ್ದೆ ತಿದ್ದುಪಡಿಯಿಂದ ಬೃಹತ್ ಸಂಸ್ಥೆಗಳು ರೈತರ ಉತ್ಪನ್ನಗಳನ್ನು ತಮಗಿಷ್ಟ ಬಂದ ದರದಲ್ಲಿ ಖರೀದಿಸುವುದಕ್ಕೆ ಅವಕಾಶವಿರುತ್ತದೆ.

ಈ ಕಾಯಿದೆಯು ಮೇಲ್ನೋಟಕ್ಕೆ ರೈತರು ತಮ್ಮ ಬೆಳೆಯನ್ನು ತಮಗಿಷ್ಟ ಬಂದಲ್ಲಿ ಮಾರಾಟ ಮಾಡುಬಹುದಾದರೂ ಶ್ರೀಮಂತ ಕಾರ್ಪೋರೇಟ್ ಕಂಪನಿಗಳು ಖರೀದಿಯಲ್ಲಿ ತೊಡಗಿಸಿಕೊಂಡು ಏಕಸ್ವಾಮ್ಯ ಮಾಡಿಕೊಳ್ಳಲಿದೆ ಎಂದ ಅವರು, ಕಾಯಿದೆ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ರೈತ ಸಂಘಟನೆಗಳೊಂದಿಗೆ ಚರ್ಚಿಸಿ ಸಾಧಕ ಬಾಧಕಗಳ ಕುರಿತು ಮಾಹಿತಿ ನೀಡಬೇಕಿತ್ತು.ಹಾಗಿದ್ದರೂ ಜನರ ಸಂಕಷ್ಟದ ಸಮಯದಲ್ಲಿ ಯಾವುದೇ ರೈತ ಸಂಘಟನೆಗಳೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರಲ್ಲದೆ, ಸುಗ್ರಿವಾಜ್ಞೆ ತರುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ ಎಂದರು.ಜಿಲ್ಲಾ ಕಾರ್ಯದರ್ಶಿ ಹೊನ್ನಪ್ಪ ಗೌಡ ಹಾಗೂ ಕಡಬ ತಾಲೂಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.