HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಾಣಿಯೂರು: ಗ್ರಾ.ಪಂ.ಅಧ್ಯಕ್ಷರಿಗೆ ಜೀವಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಪ್ರಕರಣದ ಆರೋಪಿ| ಗಣೇಶ್ ಕೆ.ಎಸ್.ರವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರ ಕರ್ತವ್ಯಕ್ಕೆ ಅಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ, ಮಹಿಳೆಯ ಘನತೆಗೆ ಕುಂದು ತಂದ ಪ್ರಕರಣದ ಆರೋಪಿಯಾಗಿರುವ ಕಾಣಿಯೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ಕೆ.ಎಸ್ ಉದನಡ್ಕ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

11-03-2020ರಂದು ಕಾಣಿಯೂರು ಪಂಚಾಯತ್‌ನ ಸಭಾಂಗಣದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್‌ನ ಆಧ್ಯಕ್ಷರಾದ ಶ್ರೀಮತಿ ಮಾಧವಿ ಕೋಡಂದೂರು ಅವರ ಅಧ್ಯಕ್ಷತೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಯುತ್ತಿದ್ದ ಸಂಧರ್ಭದಲ್ಲಿ ಸದಸ್ಯ ಗಣೇಶ್ ಕೆ.ಎಸ್ ಉದನಡ್ಕರವರು ನನಗೆ ಜೀವಬೆದರಿಕೆ ಒಡ್ಡಿ, ಸಾರ್ವಜನಿಕ ನೌಕರನಾಗಿರುವ ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ ಮತ್ತು ನನ್ನ ಗೌರವಕ್ಕೆ ಚ್ಯುತಿ ತಂದಿರುತ್ತಾರೆ ಎಂಬುದಾಗಿ ಆರೋಪಿಸಿ ಅಧ್ಯಕ್ಷೆ ಮಾಧವಿ ಕೋಡಂದೂರು ಅವರು ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು.ಸದ್ರಿ ದೂರನ್ನು ಠಾಣಾಧಿಕಾರಿಗಳು ವಿಚಾರಣೆ ನಡೆಸದೆ ಅಸಂಜ್ಞೆಯ ಪ್ರಕರಣ ಎಂಬುದಾಗಿ ಹಿಂಬರಹ ನೀಡಿ ಮುಕ್ತಾಯಗೊಳಿಸಿದ್ದರು.ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ವಿಚಾರಣೆ ನಡೆಸದೆ ಮುಕ್ತಾಯಗೊಳಿಸಿದ್ದರ ವಿರುದ್ಧ ಅಧ್ಯಕ್ಷೆ ಮಾಧವಿಯವರು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ಼್.ಸಿ ನ್ಯಾಯಾಲಯದಲ್ಲಿ ಭಾರತೀಯ ದ೦ಡ ಸ೦ಹಿತೆಯ ಕಲ೦ 353, 354, 504, 505, 506 ಮತ್ತು 509ರಡಿಯಲ್ಲಿ ಖಾಸಗಿ ಫಿರ್ಯಾದಿ ದಾಖಲಿಸಿದ್ದರು.ಆರೋಪಿಯ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಿ ವರದಿ ನೀಡುವಂತೆ ನ್ಯಾಯಾಲಯ ಮಹಿಳಾ ಪೊಲೀಸ್ ಠಾಣೆಗೆ ಆದೇಶಿಸಿತ್ತು.ಅದರಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು.ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ೫ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.