HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ನಿಂದ ಕಟ್ಟಡ ಕಾರ್ಮಿಕರಿಗೆ ಉಚಿತ ಗುರುತಿನ ಚೀಟಿ‌ ವಿತರಣೆ

Puttur_Advt_NewsUnder_1
Puttur_Advt_NewsUnder_1
  • ಒಟ್ಟು 2872 ಮಂದಿಗೆ ಉಚಿತ ಗುರುತಿನ ಚೀಟಿ ವಿತರಣೆ -ಅಶೋಕ್ ಕುಮಾರ್ ರೈ

ಪುತ್ತೂರು;ರೈ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ 2872 ಮಂದಿ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಗುರುತಿನ ಚೀಟಿಯನ್ನು ವಿತರಿಸಲಾಗಿದೆ ಎಂದು ಟ್ರಸ್ಟ್ ನ ಪ್ರವರ್ತಕರು ಅಶೋಕ್ ಕುಮಾರ್ ರೈ ಹೇಳಿದರು.
ಟ್ರಸ್ಟ್ ನ ವತಿಯಿಂದ ಉಚಿತವಾಗಿ ಮಾಡಿಕೊಡಲಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಸೆ.26ರಂದು‌ ವಿತರಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ವರ್ಷಗಳಿಂದ ಟ್ರಸ್ಟ್ ನ ಮುಖಾಂತರ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಗುರುತಿನ ಚೀಟಿ ಮಾಡಿಕೊಡಲಾಗುತ್ತಿದೆ. 1571 ಮಂದಿಯ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯ ನವೀಕರಣ, 230 ಮಂದಿಗೆ ಮದುವೆ ಸಹಾಯ ಧನ, 642 ಮಂದಿಗೆ ವಿದ್ಯಾರ್ಥಿ ವೇತನ, 134 ಮಂದಿಗೆ ವೈದ್ಯಕೀಯ ಚಿಕಿತ್ಸಾ ಸೌಲಭ್ಯ, 55 ಮಂದಿಗೆ ಪಿಂಚಣಿ ಸೌಲಭ್ಯಗಳನ್ನು ಟ್ರಸ್ಟ್ ನ ಮುಖಾಂತರ ಉಚಿತವಾಗಿ ಒದಗಿಸಿಕೊಡಲಾಗಿದೆ. ಜೊತೆಗೆ 83 ಮಂದಿಗೆ ಉಚಿತ ಮನೆ ನಿರ್ಮಾಣ, ಸ್ವಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಟೈಲರಿಂಗ್ ತರಬೇತಿ ನೀಡಿ 600 ಮಂದಿಗೆ ಟೈಲರಿಂಗ್ ಮೆಷಿನ್, ವಾಹನ ಚಾಲನಾ ತರಬೇತಿ ನೀಡಿ ಲೈಸನ್ಸ್‌ನ್ನು ಉಚಿತವಾಗಿ ಮಾಡಿಕೊಡಲಾಗಿದೆ.


ಟ್ರಸ್ಟ್ ನ ಮೂಲಕ ಮಾಡುವ ಕೆಲಸಗಳಿಗೆ ಯಾವುದೇ ರೀತಿಯ ಶುಲ್ಕವನ್ನು ಫಲಾನುಭವಿಗಳಿಂದ ಪಡೆದುಕೊಳ್ಳದೆ ಎಲ್ಲಾ ಕೆಲಸಗಳನ್ನು ಸಂಪೂರ್ಣ ಉಚಿತವಾಗಿ ಮಾಡಿ ಕೊಡಲಾಗುತ್ತಿದೆ. ಅಲ್ಲದೆ ಪಾನ್ ಕಾರ್ಡ್, ಆಯುಷ್ಮಾನ್‌ಕಾರ್ಡ್ ಮೊದಲಾದ‌ ಸರಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಆವಶ್ಯವಿರುವ ಎಲ್ಲಾ ಸೇವೆಗಳನ್ನು ಉಚಿತವಾಗಿ ಮಾಡಿಕೊಡಲಾಗುತ್ತಿದೆ. ಸರಕಾರ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ದೊರಕಿಸಿ ಕೊಟ್ಟು ಅವರನ್ನು ಸಮಾಜದ ಮುಂಚೂಣಿಗೆ ತರುವುದೇ ಟ್ರಸ್ಟಿನ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಒಟ್ಟು 35 ಮಂದಿ‌ ಫಲಾನುಭವಿಗಳಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸಿಬಂದಿಗಳಾದ ಆದರ್ಶ ಶೆಟ್ಟಿ ಉಪ್ಪಿನಂಗಡಿ‌ ಸ್ವಾಗತಿಸಿ,‌ ಲಿಂಗಪ್ಪ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.