HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಾಣಿಯೂರು: ಬಿಜೆಪಿ ಸಭೆ- ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ಮುಂಬರುವ ಗ್ರಾ.ಪಂ, ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಒಟ್ಟು ೪೬ ಗ್ರಾಮ ಪಂಚಾಯತ್‌ಗಳಲ್ಲಿಯೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಬೇಕು. ಜೊತೆಗೆ ಕಾಂಗ್ರೇಸ್ ಮುಕ್ತ ಪಂಚಾಯತ್‌ಗಳನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನಲ್ಲಿ ಪೇಜ್ ಪ್ರಮುಖರು, ಬೂತ್ ಪ್ರಮುಖರು ಪ್ರಮುಖ ಪಾತ್ರವಹಿಸಬೇಕು ಎಂದು ಸುಳ್ಯ ಬಿಜೆಪಿ ಮಂಡಲದ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು. ಅವರು ಸೆ ೨೭ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆ ಮತ್ತು ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮಾದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಪಕ್ಷ ಇದೀಗ ಯಶಸ್ಸಿನ ಎತ್ತರದಲ್ಲಿದ್ದು, ಪಕ್ಷಕ್ಕೆ ಈಗ ಸುವರ್ಣಯುಗ. ಗ್ರಾಮ ಪಂಚಾಯತ್‌ನಿಂದ ಕೇಂದ್ರದವರೆಗೂ ಬಿಜೆಪಿ ಪಕ್ಷ ರಾರಜಿಸುತ್ತಿದೆ. ಇದನ್ನು ಶಾಶ್ವತವಾಗಿ ಉಳಿಸಿಕೊಳ್ಳವ ಜವಾಬ್ದಾರಿ ನಮ್ಮ ಮೇಲಿದೆ. ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ರಾಜ್ಯ ಹಾಗೂ ಕೇಂದ್ರ ಸರಕಾರದ ಸಾಧನೆಗಳನ್ನು ಪ್ರತೀ ಮನೆಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆ ಮಾಡಬೇಕೆಂದರು. ಅಧಿಕಾರ ಎಂದೂ ಶಾಶ್ವತವಲ್ಲ ಈ ಚಿಂತನೆ ನಮ್ಮಲ್ಲಿರಬೇಕು, ಹಾಗಾದಾಗ ಮಾತ್ರ ಪಕ್ಷ ಶಾಶ್ವತವಾಗಿ ಗಟ್ಟಿಯಾಗಿ ನಿಲ್ಲುತ್ತದೆ ಎಂದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ ಮಾತನಾಡಿದರು. ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿ.ಪಂ, ಸದಸ್ಯರಾದ ಪ್ರಮೀಳಾ ಜನಾರ್ದನ, ಆಶಾ ತಿಮ್ಮಪ್ಪ, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ, ತಾ.ಪಂ, ಸದಸ್ಯರಾದ ಲಲಿತಾ ಈಶ್ವರ್, ತಾರಾ ತಿಮ್ಮಪ್ಪ, ಸುಳ್ಯ ಬಿಜೆಪಿ ಮಂಡಲ ಸಮಿತಿ ಉಪಾಧ್ಯಕ್ಷೆ ಗಂಗಾರತ್ನ ಪೆರಾಬೆ, ಕಾರ್ಯದರ್ಶಿ ಇಂದಿರಾ ಬಿ.ಕೆ, ಸದಸ್ಯರಾದ ದಯಾನಂದ ಆಲಡ್ಕ, ಕೃಷ್ಣ ಕುಂತೂರು, ಉಮೇಶ್ವರಿ ಅಗಳಿ, ಜಿಲ್ಲಾ ಬಿಜೆಪಿ ಸದಸ್ಯೆ ಪುಷ್ಪಾವತಿ ಕಳುವಾಜೆ ಹಾಗೂ ಬೂತ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ವಂದಿಸಿದರು. ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯ ಶಿವರಾಮ ರೈ ಪಿಜಕ್ಕಳ ಕಾರ್ಯಕ್ರಮ ನಿರೂಪಿಸಿದರು.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮಾದಿನಾಚರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಹಾಗೂ ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯರಾದ ಅಶೋಕ್ ಗಸ್ತಿ, ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ, ಖ್ಯಾತ ಗಾಯಕ ಎಸ್‌ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಈ ಸಂದರ್ಭದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.