HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕ.ರ.ವೇ ಸ್ವಾಭಿಮಾನಿ ಬಣ, ಕೆ.ಎಂ.ಜೆ ಪುತ್ತೂರು ಜಂಟಿ ಸಹಕಾರದೊಂದಿಗೆ ಅರ್ಹ ಕುಟುಂಬಳಿಗೆ ಆಹಾರದ ಕಿಟ್ ವಿತರಿಸಿದ ಮಲಬಾರ್ ಚಾರಿಟೇಬಲ್ ಟ್ರಸ್ಟ್

Puttur_Advt_NewsUnder_1
Puttur_Advt_NewsUnder_1

ಚಿತ್ರ: ಯೂಸುಫ್ ರೆಂಜಲಾಡಿ


ಪುತ್ತೂರು: ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಹ ಕುಟುಂಬಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದ.ಕ ಜಿಲ್ಲೆ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿಯ ಜಂಟಿ ಸಹಯೋಗದೊಂದಿಗೆ ಪುತ್ತೂರು ಶಾಲಿಮಾರ್ ಸಭಾಂಗಣದಲ್ಲಿ ಸೆ.೨೭ರಂದು ನಡೆಯಿತು. ತಾಲೂಕು ವ್ಯಾಪ್ತಿಯ ನೂರಾರು ಕುಟುಂಬಗಳಿಗೆ ಕಿಟ್ ವಿತರಿಸಲಾಯಿತು.

ಕ.ರ.ವೇ ಸ್ವಾಭಿಮಾನಿ ಬಣದ ದ.ಕ ಜಿಲ್ಲಾಧ್ಯಕ್ಷ ಹಾಜಿ ಮುಹಮ್ಮದ್ ಕುಕ್ಕುವಳ್ಳಿ ಮಾತನಾಡಿ ಮಲಬಾರ್ ಗೋಲ್ಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಅನೇಕ ಜನಪರ ಕಾರ್ಯಕ್ರಮಗಳು ನಡೆಯುತ್ತಿದ್ದು ಬಡವರ, ಅಶಕ್ತರ ಕಣ್ಣೀರೊರೆಸುವ ಕಾರ್ಯ ನಡೆಸಲಾಗುತ್ತಿದೆ, ಸಮಾಜದ ಕಟ್ಟಕಡೆಯ ಅರ್ಹ ಬಡವರನ್ನು ಗುರಿತಿಸಿ ಜಾತಿ, ಮತ ಬೇಧವಿಲ್ಲದೇ ಕಿಟ್ ವಿತರಣೆಗೆ ವ್ಯವಸ್ಥೆ ಮಾಡಿರುವ ಮಲಬಾರ್ ಸಂಸ್ಥೆಯ ಕಾರ್ಯ ಮಾದರಿಯಾಗಿದೆ ಎಂದು ಹೇಳಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಮಾತನಾಡಿ ಬಡವರಿಗೆ ಸಹಾಯ ಮಾಡುವುದು ಪುಣ್ಯದ ಕಾರ್ಯ ಎಂದು ಹೇಳಿ ಶುಭ ಹಾರೈಸಿದರು.

ಮಲಬಾರ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಫರ್ಹಾನ್ ಮಾತನಾಡಿ ಮಲಬಾರ್ ಮಂಗಳೂರು ಶಾಖೆಯ ವತಿಯಿಂದ ಅರ್ಹ ಕುಟುಂಬಗಳಿಗೆ ಕಿಟ್ ವಿತರಿಸಲು ವ್ಯವಸ್ಥೆ ಮಾಡಿದ್ದೇವೆ, ಸಂಸ್ಥೆ ವತಿಯಿಂದ ಅನೇಕ ವರ್ಷಗಳಿಂದ ಸಮಾಜಪರವಾದ ಕಾರ್ಯಗಳನ್ನು ಮಾಡುತ್ತಾ ಬರಲಾಗಿದೆ ಎಂದು ಹೇಳಿದರು.

ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ಶರತ್ ಶುಭ ಹಾರೈಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ ಬೈತಡ್ಕ, ಕಾರ್ಯದರ್ಶಿ ವಿ.ಎಚ್ ಅಬ್ದುಲ್ ಶಕೂರ್ ಹಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಕ.ರ.ವೇ ಸ್ವಾಭಿಮಾನಿ ಬಣದ ಕಡಬ ತಾಲೂಕು ಅಧ್ಯಕ್ಷ ಅಬ್ದುಲ್ ಜಲೀಲ್ ಬೈತ್ತಡ್ಕ ಹಾಗೂ ಕ.ರ.ವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು, ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಮುಖರು ಉಪಸ್ಥಿತರಿದ್ದರು. ಮಲಬಾರ್ ಸಂಸ್ಥೆಯ ನವಾಝ್, ರಫಿಕ್, ಸಂತೊಷ್ ಸುನಿಲ್, ಜೋಬೀಸ್ ರವೂಫ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಕ.ರ.ವೇ ಸ್ವಾಭಿಮಾನಿ ಬಣದ ದ.ಕ ಜಿಲ್ಲಾಧ್ಯಕ್ಷ ಹಾಜಿ ಮುಹಮ್ಮದ್ ಕುಕ್ಕುವಳ್ಳಿ ಅವರಿಗೆ ಮಲಬಾರ್ ಸಂಸ್ಥೆಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಂತರ ಮಲಬಾರ್ ಮಂಗಳೂರು ಶಾಖೆಯ ವ್ಯವಸ್ಥಾಪಕ ಶರತ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.