HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ದ.ಕ.ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್

Puttur_Advt_NewsUnder_1
Puttur_Advt_NewsUnder_1

ಬಲವಂತದ ಬಂದ್‌ಗೆ ಪ್ರಯತ್ನಿಸಿದ್ದಲ್ಲಿ ಕಾನೂನು ಕ್ರಮ-ಎಸ್ಪಿ ಬಿ.ಎಮ್. ಲಕ್ಷ್ಮೀ ಪ್ರಸಾದ್
ಪುತ್ತೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಭೂ-ಸುಧಾರಣೆ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮಸೂದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಜಂಟಿಯಾಗಿ ಸೆ. ೨೮ರಂದು ನಡೆಸುವ ಹೋರಾಟದ ಸಂದರ್ಭದಲ್ಲಿ ಬಲವಂತದ ಬಂದ್‌ಗೆ ಒತ್ತಾಯಿಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಮ್.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಲ್ ಇಂಡಿಯ ಕಿಸಾನ್ ಸಭಾ, ರೈತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಜನಶಕ್ತಿ ಹಾಗೂ ಇನ್ನಿತರೇ ರೈತ ಸಂಘಟನೆಗಳು ಜಂಟಿಯಾಗಿ ಆಯಾ ಸ್ಥಳೀಯ ಮುಖಂಡರುಗಳು ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವುದು ತಿಳಿದಿರುತ್ತದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಜಿಲ್ಲೆಯಲ್ಲಿ ಎ.ಎಸ್.ಪಿ./ಡಿವೈಎಸ್ಪಿ-೩, ಸಿಪಿಐ/ಪಿಐ -೮, ಪಿಎಸ್‌ಐ-೨೫, ಎಎಸ್‌ಐ-೪೫, ಹೆಚ್‌ಸಿ/ಪಿಸಿ- ೩೨೦ ಹಾಗೂ ೫೦ ಮಂದಿ ಗೃಹರಕ್ಷಕ ದಳದ ಸಿಬ್ಬಂದಿಯವರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದರೊಂದಿಗೆ ೩ ಕೆ.ಎಸ್.ಆರ್.ಪಿ. ತುಕಡಿ ಹಾಗೂ ೩ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತುಕಡಿಗಳನ್ನು ಬಿ.ಸಿ.ರೋಡು, ಪುತ್ತೂರು, ಕಲ್ಲಡ್ಕ, ಉಪ್ಪಿನಂಗಡಿ, ಸುಳ್ಯ ಬೆಳ್ತಂಗಡಿ ಕಡೆಗಳಲ್ಲಿ ನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾದಂತೆ ಸಂಯಮದಿಂದ ವರ್ತಿಸುವಂತೆ ಹಾಗೂ ಬಲವಂತವಾಗಿ ಯಾರಾದರೂ ಬಂದ್ ಮಡಲು ಪ್ರಯತ್ನಿಸಿದ್ದಲ್ಲಿ ಅಥವಾ ಒತ್ತಾಯಿಸಿದ್ದಲ್ಲಿ ಜಿಲ್ಲಾ ನಿಯಂತ್ರಣ ಕೊಠಡಿ ದೂರವಾಣಿ ೦೮೨೪-೨೨೨೦೫೦೮ಗೆ ಕರೆ ಮಾಡಿ ತಿಳಿಸುವಂತೆ ಅವರು ತಿಳಿಸಿದ್ದಾರೆ. ಇದೇ ವೇಳೆಯಲ್ಲಿ ಕೋವಿಡ್-೧೯ ತಡೆಗಾಗಿ ಇರುವ ನಿಯಾಮಾವಳಿಗಳನ್ನು ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುತ್ತೂರಿನಲ್ಲೂ ಬಿಗಿ ಬಂದೋಬಸ್ತ್ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಕೆ.ಎಸ್,ಆರ್.ಪಿ ತುಕಡಿಯೊಂದು ಪುತ್ತೂರಿಗೆ ಆಗಮಿಸಿದೆ. ಇದರ ಜೊತೆ ಪುತ್ತೂರು ನಗರ ಪೊಲೀಸ್ ಠಾಣೆ, ಸಂಚಾರ ಪೊಲೀಸ್ ಠಾಣೆ, ಮಹಿಳಾ ಪೊಲಿಸ್ ಠಾಣೆಯ ಇನ್‌ಸ್ಪೆಕ್ಟರ್‌ಗಳು ಮತ್ತು ಎಸ್.ಐ ನೇತೃತ್ವದಲ್ಲಿ ಸಿಬ್ಬಂದಿಗಳು ಸೇರಿದಂತೆ ಗೃಹರಕ್ಷಕದಳದವರ ಆಯಾಯ ಕಡೆಗಳಲ್ಲಿ ಬಂದೋಬಸ್ತ್ ಏರ್ಪಡಿಸಲಿದ್ದಾರೆ. ಪುತ್ತೂರು ಗಾಂಧಿಕಟ್ಟೆಯ ಬಳಿ ನಡೆಯುವ ಪ್ರತಿಭಟನೆಗೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ದರ್ಬೆ, ಕೆಮ್ಮಾಯಿ, ಕಬಕ, ಸಾಲ್ಮರ, ಕೂರ್ನಡ್ಕ, ಪರ್ಲಡ್ಕ, ಬನ್ನೂರು ಕಡೆಗಳಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ತಿಳಿಸಿದ್ದಾರೆ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.