HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸೆ.30: ಕೋಡಿಂಬಾಡಿಯಲ್ಲಿ ಕೋವಿಡ್-19 ತಪಾಸಣಾ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳ ನಿವಾಸಿಗಳಿಗಾಗಿ ವಿಶೇಷ ಕೋವಿಡ್ ತಪಾಸಣಾ ಶಿಬಿರ ಸೆ.30ರಂದು ಬೆಳಿಗ್ಗೆ ಗಂಟೆ 10.30 ರಿಂದ 1 ಗಂಟೆಯವರಗೆ ಕೋಡಿಂಬಾಡಿ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ‌ ನಡೆಯಲಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಸಹಕರಿಸುವಂತೆ ಗ್ರಾ.ಪಂ. ಆಡಳಿತಾಧಿಕಾರಿಯಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ‌ ಲೋಕೇಶ್ ಸಿ.‌ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಗೆ ಬರುವವರು ತಮ್ಮ ಮೊಬೈಲ್ ಪೋನ್ ಜೊತೆಗೆ ತರಬೇಕು. ನೋಂದಾವಣೆಯ ಬಳಿಕ ಮೊಬೈಲ್ ನಂಬರಿಗೆ ಒಟಿಪಿ ಸಂಖ್ಯೆ ಬರುತ್ತದೆ. ಅದನ್ನು ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ನೀಡಬೇಕಾಗಿರುತ್ತದೆ. ಕುಟುಂಬದ ಸದಸ್ಯರೆಲ್ಲರೂ ಒಂದೇ ಮೊಬೈಲ್ ಫೋನ್ ನಂಬರನ್ನು ಬಳಸಿಕೊಳ್ಳಬಹುದು.ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಗ್ರಾಪಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.