HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಸಭೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ:  ಪ್ರತಿ ಗ್ರಾ.ಪಂನಲ್ಲಿ ಇರುವ ಸರಕಾರಿ ಜಾಗಗಳನ್ನು ಗುರುತಿಸಿ, ಅದರಲ್ಲಿ  ಮುಂದಿನ ೨೫ವರ್ಷಗಳಿಗೆ ಬೇಕಾಗುವ ಜಾಗಗಳನ್ನು ಪಂಚಾಯತ್ ಹೆಸರಿನಲ್ಲಿ ಕಾಯ್ದಿರಿಸುವ ಪ್ರಕ್ರೀಯೆ ಪ್ರತಿಯೊಂದು ಗ್ರಾ.ಪಂ ನಿಂದ ಆಗಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಸತಿ ರಹಿತರಿಗೆ ನಾವು ಜಾಗವನ್ನು ಪರ್ಚೇಸ್ ಮಾಡಿ ಕೊಡಬೇಕಾದ ಪರಿಸ್ಥಿತಿ ಬರಬಹುದು. ಆದ್ದರಿಂದ ಈಗಲೇ ನಾವು ಎಚ್ಚೆತ್ತುಕೊಂಡು ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮುಂಚಿತವಾಗಿಯೇ ಮಾಡಬೇಕು ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರುರವರು ಹೇಳಿದರು.

ಅವರು‌ಸೆ.29ರಂದು ವಿಟ್ಲದ ಅತಿಥಿಗೃಹದಲ್ಲಿ ನಡೆದ ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಪುಣಚ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಹರಿ ಪ್ರಸಾದ್, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅರುಣ್ ವಿಟ್ಲ, ಕೇಪು ಬಿ.ಜೆ.ಪಿ ಶಕ್ತಿಕೇಂದ್ರದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.