HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಷ್ಟ್ರೀಯ ಆರೋಗ್ಯ ಮಿಷನ್, ರಾಜ್ಯ ಅರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಯಡಿಯಲ್ಲಿ ಬರುವ ರಾಜ್ಯದ ಸುಮಾರು 30,000ವೈದ್ಯಕೇತರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಹಮ್ಮಿಕೊಂಡಿರುವ ಸಮಾನ ವೇತನ, ಸಮಾನ ಭತ್ತೆ , ಸೇವಾ ಭದ್ರತೆ ಮುಂತಾದ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಿರಂತರ ಮುಷ್ಕರ ನಡೆಯುತ್ತಿದ್ದು, ಇದೀಗ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ನೀಡಲಾಯಿತು.


ಮುಷ್ಕರವು ಇದೀಗ ೫ನೇ ದಿನಕ್ಕೆ ಕಾಲಿಟ್ಟಿದ್ದು, ಇದುವರೆಗೆ ಸರಕಾರ ಸ್ಪಂದಿಸದೆ ಇರುವುದರಿಂದ ಸಾರ್ವಜನಿಕರು ಆರೋಗ್ಯ ಸೇವೆ ವಂಚಿತರಾಗಿದ್ದು, ಈ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಇಲಾಖೆಯಲ್ಲಿ ಉತ್ತಮ ಸೇವೆ ನೀಡಲು ಅನುಕೂಲವಾಗುವಂತೆ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ, ಆರೋಗ್ಯ ಸಚಿವರಿಗೆ, ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಹಾಗೂ ಇಲಾಖಾ ಅಧಿಕಾರಿಗಳಿಗೆ ಒತ್ತಾಯಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಇತ್ತೀಚಿಗೆ ವೈದ್ಯರ ವೇತನ ಹೆಚ್ಚಳ ಮತ್ತು ಮಾಸಿಕ ರೂ.೧೦೦೦೦, ರಿಸ್ಕ್ ಭತ್ತೆ ನೀಡಿರುವುದನ್ನು ಕೊರೋನಾ ಸಂದರ್ಭದಲ್ಲಿ ಹಗಲಿರುಳು ದುಡಿಯುತ್ತಿರುವ ಎಲ್ಲಾ ಕೊರೋನಾ ವಾರಿಯರ್ಸ್ ಗಳಿಗೂ ಸಮಾನವಾಗಿ ನೀಡಬೇಕೆಂದು ಅಗ್ರಹಿಸಲಾಯಿತು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ದಿನಗೂಲಿ ನೌಕರರಿಗೆ ಅಗುತ್ತಿರುವ ಅಧಿಕ ಸಮಯದ ಕೆಲಸದ ಒತ್ತಡ ಹಾಗೂ ಗುತ್ತಿಗೆದಾರರ ಕಿರುಕುಳದ ಬಗ್ಗೆ ನೌಕರರು ಲಿಖಿತ ದೂರನ್ನು ಇದೇ ಸಂದರ್ಭದಲ್ಲಿ ಸಂಘಟಕರು ನೀಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.