ಅ.3: ಬೆದ್ರಾಳದಲ್ಲಿ ಮೌಲಾನಾ ಆಝಾದ್ ಶಾಲಾ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುತ್ತಿರುವ ಮೌಲಾನಾ ಅಝಾದ್ ಮಾದರಿ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಅ.3ರಂದು ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಬೆದ್ರಾಳ ಎಂಬಲ್ಲಿ ನಡೆಯಲಿದೆ ಎಂದು ಬಿಜೆಪಿ ಕಾರ್ಯಕರ್ತ, ಪುತ್ತೂರು ಸರ್ಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಫೀಕ್ ದರ್ಬೆ ತಿಳಿಸಿದ್ದಾರೆ. ಅ.1ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತನಕ ಮೌಲಾನಾ ಆಝಾದ್ ಶಾಲೆಯು ಬಾಡಿಗೆ ಕಟ್ಟಡದಲ್ಲಿ ನಡೆಸಲ್ಪಡುತ್ತಿತ್ತು. ಕಟ್ಟಡ ನಿರ್ಮಾಣಕ್ಕೆ ಇದೀಗ ಬೆದ್ರಾಳದಲ್ಲಿ 81 ಸೆಂಟ್ಸ್ ಜಮೀನು ಗುರುತಿಸಲಾಗಿದ್ದು, ಅಲ್ಲಿ ನೂತನ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಕಟ್ಟಡ ನಿರ್ಮಾಣಕ್ಕಾಗಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ರೂ. ೨.೩೫ ಕೋಟಿ ಅನುದಾನ ಶಾಸಕ ಸಂಜೀವ ಮಠಂದೂರು ಅವರ ಪ್ರಯತ್ನದಿಂದ ಬಿಡುಗಡೆಗೊಂಡಿದೆ. ಮುಂದಿನ ೮ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ರಾಜ್ಯದಲ್ಲಿ ಒಟ್ಟು ೨೦೦ ಶಾಲೆಗಳು ಮಂಜೂರಾಗಿದೆ. ಇದರಲ್ಲಿ 8 ಶಾಲೆಗಳು ಜಿಲ್ಲೆಗೆ ಮಂಜೂರುಗೊಂಡಿದ್ದು ಮೊದಲ ಹಂತದ ಶಂಕುಸ್ಥಾಪನೆ ಪುತ್ತೂರಿನಲ್ಲಿ ನಡೆಯಲಿದೆ ಎಂದರು.


ನೂತನ ಶಾಲಾ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನಡೆಸಲಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ, ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಗೌರವ ಉಪಸ್ಥಿತರಿರುತ್ತಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ ಫಾರೂಕ್, ಆಯನೂರು ಮಂಜುನಾಥ, ಎಸ್.ಎಲ್ ಬೋಜೇ ಗೌಡ, ಕೆ.ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ತಾಪಂ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಮತ್ತು ಪೌರಾಯುಕ್ತೆ ರೂಪಾ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಕೆಡಿಪಿ ಸದಸ್ಯ ಅಬ್ದುಲ್ ಕುಂಞಿ ಪಟ್ಟೆ, ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತ ಅಬ್ದುಲ್ ರಝಾಕ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.