HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಶಕುಂತಳಾ ಶೆಟ್ಟಿ ಸಲ್ಲಿಸಿದ ಪ್ರಸ್ತಾವನೆಯನ್ನು ತನ್ನ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ಸಂಜೀವ ಮಠಂದೂರು- ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಪತ್ರಿಕಾಗೋಷ್ಠಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿಯವರು ಸಲ್ಲಿಸಿದ್ದ ಪ್ರಸ್ತಾವನೆಗಳನ್ನೇ ಈಗಿನ ಶಾಸಕರು ತನ್ನ ಶಿಪಾರಸ್ಸಿ ಮೇರೆಗೆ ಅನುಮೋದನೆಗೊಂಡಿರುವುದಾಗಿ ಹೇಳಿಕೆ ನೀಡುವ ಮೂಲಕ ತಪ್ಪು ಮಾಹಿತಿ ನೀಡಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ ಆರೋಪಿಸಿದ್ದಾರೆ. ಅ.1ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿವರು 2017ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಆಯ್ದ ಕೆಲವು ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸುವಂತೆ ಅಂದಿನ ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪರವರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಪ್ರಸ್ತಾವನೆ ಸ್ವೀಕರಿಸಿದ ಸಚಿವರು ಈ ಪ್ರಸ್ತಾವನೆಯನ್ನು ಒಪ್ಪಿ ಶಿಫಾರಸು ಮಾಡಿ, ಮುಂದಿನ ಕ್ರಮಕ್ಕೆ ಆದೇಶಿಸಿರುತ್ತಾರೆ. ಈ ಆದೇಶದ ನಂತರ ಇಲಾಖಾ ಪ್ರಕ್ರಿಯೆಗಳು ಪೂರ್ಣಗೊಂಡು ಇದೀಗ ಪ್ರಸ್ತಾವನೆಗಳು ಅನುಮೋದನೆಗೊಂಡು ಈ ರಸ್ತೆಗಳು ಜಿಲ್ಲಾ ಮುಖ್ಯರಸ್ತೆಗಳಾಗಿ ಮೇಲ್ದರ್ಜೆಗೇರಿದೆ. ಈ ಸಾಧನೆಯನ್ನು ತನ್ನದೆಂದು ಬಿಂಬಿಸಿ ತನ್ನ ಶಿಫಾರಸ್ಸಿನ ಮೇರೆಗೆ ಆಗಿದೆ ಎಂದು ಹೇಳುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಅಭಿವೃದ್ಧಿಯಲ್ಲಿ ನಿರಾಸಕ್ತಿ:
ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದುಕೊಂಡು ಸುಮಾರು 14 ಕೋಟಿ ರೂಪಾಯಿಗಳ ಅಂದಾಜು ಪಟ್ಟಿ ತಯಾರಿಸಿ ಕಾಮಗಾರಿ ಮಂಜೂರಾಗಿ ಒಂದು ವರ್ಷದ ಹಿಂದೆ ಮೂರ ಕೋಟಿ ಬಿಡುಗಡೆಯಾಗಿದೆ. ಈ ಕಾಮಗಾರಿಯ ಶ್ರೇಯಸ್ಸು ಎಲ್ಲಿ ಮಾಜಿ ಶಾಸಕಿಯರಿಗೆ ಬರುತ್ತದೋ ಎಂಬ ಭಯದಿಂದ ಈಗಿನ ಶಾಸಕರು ಈ ಕ್ರೀಡಾಂಗಣದ ಕಾಮಗಾರಿಗೆ ನೆನೆಗುದಿಗೆ ಬೀಳುವಂತೆ ವ್ಯವಸ್ಥಿತವಾಗಿ ಅಡ್ಡಗಾಲು ಹಾಕಿದ್ದಾರೆ. ಮಹಿಳಾ ಕಾಲೇಜು ಕಟ್ಟಡಕ್ಕೆ ಆನೆಮಜಲಿನಲ್ಲಿ ಸ್ಥಳ ಕಾದಿರಿಸಿ ಕಟ್ಟಡ ನಿರ್ಮಾಣಕ್ಕೆ ರೂ.೭ಕೋಟಿ ಮಂಜೂರುಗೊಳಿಸಿದ್ದರು. ಇದಾದ ಬಳಿಕ ಬಂದ ಹೊಸ ಶಾಸಕರು ರೂ.೪.೫ಕೋಟಿ ಬಿಡುಗಡೆಯಾಗಿ ಒಂದು ವರ್ಷ ಕಳೆದರೂ ಕಟ್ಟಡದ ಕೆಲಸ ಆರಂಭಿಸದೇ ಇರುವುದರಿಂದ ಅಭಿವೃದ್ಧಿ ಕೆಲಸದಲ್ಲಿ ಅವರಿಗಿರುವ ನಿರಾಸಕ್ತಿಯನ್ನು ಎತ್ತಿ ತೋರಿಸುತ್ತಿದೆ ಎಂದರು.

ಅಭಿವೃದ್ಧಿ ಮರೀಚಿಕೆ:
ಸಂಜೀವ ಮಠಂದೂರು ಶಾಸಕರಾದ ಬಳಿಕ ಪುತ್ತೂರಿನಲ್ಲಿ ಅಭಿವೃದ್ಧಿಯು ಮರೀಚಿಕೆಯಾಗಿದೆ. ತನ್ನಂದ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗದ ಅವರು ಶಂಕುಂತಳಾ ಶೆಟ್ಟಿಯವರ ಅವಧಿಯಲ್ಲಿ ನಡೆದ ಕಾಮಗಾರಿಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳುವ ಮೂಲಕ ನಾಚಿಕೆಗೇಡಿನ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಶಾಸಕರು ಇನ್ನಾದರೂ ಪುತ್ತೂರಿಗೆ ಒಂದಷ್ಟು ಅನುದಾನಗಳನ್ನು ತಂದು ಅವರನ್ನು ಆರಿಸಿದ ಜನತೆಯ ಋಣ ತೀರಿಸಲಿ ಎಂದು ಸವಾಲು ಹಾಕಿದರು. ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿಲ್ಮಾ ಗೊನ್ಸಾಲ್ವಿಸ್, ಗಂಗಾಧರ ರೈ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.