HomePage_Banner
HomePage_Banner
HomePage_Banner
HomePage_Banner
HomePage_Banner

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಾಂಧಿ ಜಯಂತಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ೧೫೧ ಜನ್ಮ ದಿನಾಚರಣೆಯು ಅ.೨ ಮಿನಿವಿಧಾನ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸ್ವಚ್ಚತೆ, ಸರಳತೆ, ಸ್ವಾಭಿಮಾನ ಹಾಗೂ ಸ್ವಾವಲಂಭಿ ತತ್ವವನ್ನು ಮಹಾತ್ಮ ಗಾಂಧೀಜಿಯವರು ಜಗತ್ತಿಗೆ ಸಾರಿದವರು. ನನ್ನ ಜೀವನನವೇ ನನ್ನ ಸಂದೇಶ ಎಂದು ಹೇಳಿದವರು. ಅವರ ತತ್ವ, ಸಿದ್ದಾಂತಗಳು ಇಂದಿನ ಸಮಾಜಕ್ಕ ಪ್ರಸ್ತುತವಾಗಿದೆ. ಗಾಂಧಿಜಿ ಕಂಡ ರಾಮರಾಜ್ಯದ ಕಲ್ಪಣೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತ ಯೋಜನೆಯ ಮೂಲಕ ಸಾಕಾರಗೊಳಿಸುತ್ತಿದ್ದಾರೆ ಎಂದರು.

ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಮಾತನಾಡಿ, ಸ್ವಚ್ಚತೆಗೆ ಆಧ್ಯತೆ ನೀಡಿರುವ ಮಹಾತ್ಮ ಗಾಂಧಿಜಿಯವರ ಜನ್ಮ ದಿನದ ಅಂಗವಾಗಿ ಕಚೇರಿ ಆವರಣದಲ್ಲಿ ಸ್ವಚ್ಚತೆಯನ್ನು ಹಮ್ಮಿಕೊಳ್ಳಲಾಗುವುದು. ಅವರ ಆದರ್ಶಗಳನ್ನು ಪಾಲಿಸಿಕೊಂಡು ಕಚೇರಿಗೆ ಬರುವ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು ಎಂದು ಅವರು ಹೇಳಿದರು.

ಎ.ಎಸ್.ಪಿ ಲಖನ್ ಸಿಂಗ್ ಯಾಧವ್, ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೌರಾಯುಕ್ತೆ ರೂಪಾ ಶೆಟ್ಟಿ ಸ್ವಾಗತಿಸಿದರು. ಉಪತಹಶೀಲ್ದಾರ್ ಸುಲೋಚನ ಪಿ.ಕೆ., ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ತಾ.ಪಂ ಸದಸ್ಯೆ ಮೀನಾಕ್ಷಿ ಮಂಜುನಾಥ, ಗಾಂಧಿ ಕಟ್ಟೆ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ಇಸಾಖ್ ಸಾಲ್ಮರ ಹಾಗೂ ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.