HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಗಾಂಧಿ ಸ್ಮೃತಿ, ನವಜೀವನೋತ್ಸವ

Puttur_Advt_NewsUnder_1
Puttur_Advt_NewsUnder_1

    
ನೆಲ್ಯಾಡಿ: ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೆಲ್ಯಾಡಿ ವಲಯ ಇವುಗಳ ಆಶ್ರಯದಲ್ಲಿ ಗಾಂಧಿ ಸ್ಮೃತಿ ಹಾಗೂ ನವಜೀವನೋತ್ಸವ ಕಾರ್ಯಕ್ರಮ ಅ.೨ರಂದು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಗಾಂಧಿ ಜಯಂತಿ ಪ್ರಯುಕ್ತ ಬೆಳಿಗ್ಗೆ ನೆಲ್ಯಾಡಿ ಗಾಂಧಿ ಮೈದಾನದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಸಭಾಂಗಣದಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮ ನಡೆಯಿತು. ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಆನಂದ ಅಜಿಲ, ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ., ಶಿಕ್ಷಕರಾದ ಪ್ರವೀಣ ಕುಮಾರಿ, ಪ್ರಸನ್ನ ಎಂ., ಮೇರಿ ಟಿ.ವಿ., ಜಯಂತಿ ಎಸ್., ವಿಮಲ್‌ಕುಮಾರ್ ಕೆ.ಎ., ಮಮತಾ ಸಿ.ಹೆಚ್.,ಶಿವಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ, ನೋಟರಿ ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ, ನೆಲ್ಯಾಡಿ ವಲಯದ ಮಾಜಿ ಅಧ್ಯಕ್ಷ ಪಿ.ಜೆ.ಸೆಬಾಸ್ಟಿಯನ್, ನೆಲ್ಯಾಡಿ ಜೆಸಿಐ ಅಧ್ಯಕ್ಷ ಶಿವಪ್ರಸಾದ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಂದೇಶ್ ಮತ್ತಿತರರು ಗಾಂಧಿ ಸ್ಮೃತಿ ಅಂಗವಾಗಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.


ನವಜೀವನೋತ್ಸವ:
ಬಳಿಕ ನಡೆದ ನವಜೀವನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಮಾತನಾಡಿ, ಯುವ ಜನತೆ ತಪ್ಪು ದಾರಿಗೆ ಹೋಗುವುದನ್ನು ತಡೆಯಲು ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಲಿವೆ. ಬಾರ್, ವೈನ್‌ಶಾಪ್‌ಗಳ ವಿರುದ್ಧ ಪ್ರತಿಭಟನೆ ನಡೆಸುವುದಕ್ಕಿಂತಲೂ ಸ್ವ ಇಚ್ಛೆಯಿಂದ ನಾವೇ ಮದ್ಯ ವ್ಯಸನ ತ್ಯಜಿಸಿ ನವಜೀವನ ನಡೆಸುವಂತಾಗಬೇಕೆಂದು ಹೇಳಿದರು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾಕರ ರೈಯವರು ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮದ್ಯವರ್ಜನ ಶಿಬಿರಗಳ ಮೂಲಕ ಮದ್ಯ ಮುಕ್ತರಾಗಿ ಬದಲಾವಣೆಯಾದವರು ಇನ್ನಷ್ಟೂ ಮಂದಿಯ ಬದಲಾವಣೆಗೆ ಕಾರಣರಾಗಬೇಕೆಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್ ನೆಲ್ಯಾಡಿಯವರು ಮಾತನಾಡಿ, ಸರ್ವಧರ್ಮ ಪ್ರಾರ್ಥನೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಸಾಧ್ಯವಿದೆ ಎಂದರು. ನೆಲ್ಯಾಡಿ ಗ್ರಾ.ಪಂ.ಪಿಡಿಒ ಮಂಜುಳರವರು ಸ್ವಚ್ಚತೆ ಕುರಿತ ಪ್ರಮಾಣ ವಚನ ಬೋಧಿಸಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ, ಮಾಜಿ ವಲಯಾಧ್ಯಕ್ಷ ಪಿ.ಜೆ.ಸೆಬಾಸ್ಟಿಯನ್, ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ವಾಲ್ಟರ್ ಡಿ.ಸೋಜ, ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಆನಂದ ಅಜಿಲ, ನವಜೀವನ ಸಮಿತಿ ನೆಲ್ಯಾಡಿ ವಲಯಾಧ್ಯಕ್ಷ ರೂಪೇಶ್, ನೆಲ್ಯಾಡಿ ಜೆಸಿಐ ಅಧ್ಯಕ್ಷ ಶಿವಪ್ರಸಾದ್, ಎಪಿಎಂಸಿ ಸದಸ್ಯ ಕುಶಾಲಪ್ಪ ಗೌಡ ಅನಿಲ, ನೋಣಯ್ಯ ಪೂಜಾರಿ ಅಂಬರ್ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಗುರುತಿಸುವಿಕೆ:
ನವಜೀವನ ಸಮಿತಿ ಸದಸ್ಯರಾದ ನಾಗಪ್ಪ ಕುಂಬಾರ ಮಾದೇರಿ, ಬಾಬು ಇಚ್ಲಂಪಾಡಿ, ರೂಪೇಶ್, ವಾಸಪ್ಪ ಕುಂಬಾರ, ನಾರಾಯಣ ಪೂಜಾರಿ,ವಿಶ್ವನಾಥ ಶೆಟ್ಟಿ, ನೋಣಯ್ಯ ಪೂಜಾರಿ ಅಂಬರ್ಜೆ, ರಾಮಚಂದ್ರ ಪೂಜಾರಿ ಅಂಬರ್ಜೆ, ಕುಶಾಲಪ್ಪ ಗೌಡ ಅನಿಲ, ನೇಮಿರಾಜ ಕಲಾಯಿ, ಜಿನ್ನಪ್ಪ ಗೌಡ ಮುಳಿಂಗಾರು ಕೌಕ್ರಾಡಿ ಇವರಿಗೆ ಗುಲಾಬಿ ಹೂ ನೀಡಿ, ಶಾಲು ಹಾಕಿ ಕಾರ್ಯಕ್ರಮದಲ್ಲಿ ಗೌರವಾರ್ಪಣೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೆಲ್ಯಾಡಿ ವಲಯ ಮೇಲ್ವಿಚಾರಕ ಸಂದೇಶ್ ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು. ನೆಲ್ಯಾಡಿ ಗ್ರಾ.ಪಂ.ಕಾರ್ಯದರ್ಶಿ ದೇವರಾಜ್, ನೆಲ್ಯಾಡಿ ಜೆಸಿಐ ಕಾರ್ಯದರ್ಶಿ ಗಿರೀಶ್, ಗ್ರಾ.ಪಂ.ಮಾಜಿ ಸದಸ್ಯೆ ಸವಿತಾ ಸರ್ವೋತ್ತಮ ಸೇರಿದಂತೆ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.