HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅನಂತಾಡಿ ಗ್ರಾ.ಪಂ.ನ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ, ಏಕರೂಪದ ಬ್ರಾಂಡಿಂಗ್ ಲೋಕಾರ್ಪಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಸರಕಾರ ಸ್ವಚ್ಚತೆಗಾಗಿ ಹಾಕಿಕೊಂಡಿರುವ ಕಾರ್ಯಕ್ರಮಗಳನ್ನು ಅಧಿಕಾರಿ ವರ್ಗದವರು ಅನುಷ್ಠಾನಕ್ಕೆ ತಂದಾಗ ಅದನ್ನು ಸಾರ್ವಜನಿಕರು ಪಾಲನೆ ಮಾಡಿದಲ್ಲಿ ನಾವು ಮಾಡಿದ ಕೆಲಸ ಪರಿಪೂರ್ಣವಾಗುತ್ತದೆ ಎಂದು ದ ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಅ.2ರಂದು ಅನಂತಾಡಿ ಗ್ರಾಮದ ಆರಂಗಳದಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್, ಅನಂತಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ನಡೆಸಿ ಮಾತನಾಡಿದರು.
ಸ್ವಚ್ಛತೆಯನ್ನು ಇತರರೇ ಮಾಡಬೇಕು ಎಂಬ ಭಾವನೆಯನ್ನು ಬಿಟ್ಟು ಪ್ರತಿಯೊಬ್ಬರೂ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತಾಗಬೇಕು. ಸ್ವಚ್ಚತೆಗೆ ಕರ್ನಾಟಕ ರಾಜ್ಯದಲ್ಲೇ ದ.ಕ ಜಿಲ್ಲೆ ಸ್ವಚ್ಚತೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವುದು ಸಂತಸದ ವಿಚಾರವಾಗಿದೆ. ನಮ್ಮ ಜಿಲ್ಲೆಯಲ್ಲಿ ಹೊಸಕನಸನ್ನು ಹೊತ್ತು ಕೆಲಸ ಮಾಡುವ ಶಾಸಕರುಗಳು ಇದ್ದಾರೆ. ಅದೇ ರೀತಿ ಕೆಲಸ ಮಾಡುವ ಇಲಾಖಾಧಿಕಾರಿಗಳಿದ್ದಾರೆ. ಆದ್ದರಿಂದ ನಮ್ಮ ಎಲ್ಲಾ ಕಾರ್ಯಕ್ರಮಗಳು ಯಶಸ್ಸಾಗುತ್ತದೆ. ಗ್ರಾಮಪಂಚಾಯತ್ ಸ್ವಚ್ಚವಾಗಬೇಕಾದರೆ ಗ್ರಾಮದ ಪ್ರತಿಯೊಂದು ಮನೆ, ಜನ ಸ್ವಚ್ಚವಾಗಿರಬೇಕು ಎಂದರು.

ಸಾರ್ವಜನಿಕ ಶೌಚಾಲಯದ ಶಂಕುಸ್ಥಾಪನೆ ನೆರವೇರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತುರವರು ಮಾತನಾಡಿ ಬೆಳೆಯುತ್ತಿರುವ ಜಗತ್ತಿನಲ್ಲಿ ಸ್ವಚ್ಛತೆಗೆ ಬಹಳಷ್ಟು ಒತ್ತು ಕೊಡುವ ಅಗತ್ಯವಿದೆ. ಆಹಾರ ಹಾಗೂ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಒಳ್ಳೆಯ ವಿಷಯಕ್ಕೆ ವ್ಯವಸ್ಥೆಯನ್ನು ಬಳಸಿಕೊಳ್ಳುವ ಕಾರ್ಯವಾಗಬೇಕು. ಸರಕಾರದ ಯೋಜನೆಗಳನ್ನು ಜನ ಅರ್ಥೈಸಿಕೊಂಡಾಗ ಎಲ್ಲಾ ಯೋಜನೆಗಳು ಯಶಸ್ಸಾಗುತ್ತದೆ ಎಂದು ತಿಳಿಸಿದರು.

ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆಯ ವಸ್ತುಪ್ರದರ್ಶನವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಘನತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತಾಲೂಕು ಪಂಚ್ಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಮಗಾರಿಗೆ ಸಹಕಾರ ನೀಡಿದ ವ್ಯಕ್ತಿಗಳನ್ನು ಗೌರವಿಸಲಾಯಿತು. ಗ್ರಾಮಸ್ಥರಿಗೆ ಒಣಕಸ ಹಾಗೂ ಹಸಿ ಕಸ ಸಂಗ್ರಹಣೆಗಾಗಿ ಬುಟ್ಟಿಗಳ ವಿತರಣೆ ನಡೆಯಿತು.

ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಮಲ್ಲಿಕಾ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಪಂಚ್ಯತ್ ಸದಸ್ಯರಾದ ಮಂಜುಳಾಮಾಧವ ಮಾವೆ, ಕಮಲಾಕ್ಷಿ, ಅನಂತಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸನತ್ ಕುಮಾರ ರೈ, ಉಪಾಧ್ಯಕ್ಷೆ ಕವಿತಾ, ಸುಲೋಚನಾ ಭಟ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅನಂತಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಪ್ರವೀಣ್ ಜೋಷಿ ವಂದಿಸಿದರು. ನೆರವು ಘಟಕದ ಎಚ್.ಆರ್.ಡಿ. ನವೀನ್, ಡೊಂಬಯ್ಯ ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ ಕೆ. ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.