ನೂಜಿಬಾಳ್ತಿಲದಲ್ಲಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ

Puttur_Advt_NewsUnder_1
Puttur_Advt_NewsUnder_1

ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ನಲ್ಲಿ ಅ.2ರಂದು ಗಾಂಧೀ ಜಯಂತಿ ಪ್ರಯುಕ್ತ ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆನಂದ ಎ ಗಾಂಧೀ ಜಯಂತಿ ಬಗ್ಗೆ ಮಾತನಾಡಿ ಬಾಪುಜಿ ಮಹಾತ್ಮ ಗಾಂಧೀಜಿಯವರ ಜನ್ಮ ದಿನದಂದು ಅವರ ಕನಸಿನ ಕೂಸಾದ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯೊಂದಿಗೆ ಸರಕಾರದ ಹಲವಾರು ಯೋಜನೆಗಳಲ್ಲಿ ಒಂದಾದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕರು ತಮ್ಮ ವ್ಯಯಕ್ತಿಕ ಹಾಗೂ ಸಾರ್ವಜನಿಕ ಕೆಲಸಗಳನ್ನು ಮಾಡುವ ಮೂಲಕ ಸ್ವವಲಂಬಿಗಳಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದ್ದು ನಮ್ಮ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಸ್ಥರು ಅತಿ ಹೆಚ್ಚಿನ ಸೌಲಭ್ಯವನ್ನು ಪಡೆಯುತ್ತಿದ್ದು ಇನ್ನೂ ಅತಿ ಹೆಚ್ಚಿನ ಫಲನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು ಬಳಿಕ ಸ್ವಚ್ಛತಾ ಪ್ರತಿಜ್ಞಾ ವಿಧಿ ನೆರವೇರಿಸಿದರು.

ಗ್ರಾ.ಪಂ. ಮಾಜಿ ಸದಸ್ಯರಾದ ತೋಮಸ್ ಕೆ.ಜೆ ಮಾತನಾಡಿ ಗ್ರಾ.ಪಂ. ನ ಅಭಿವೃದ್ಧಿಯಲ್ಲಿ ತಮ್ಮ ಸಹಕಾರ ಹಾಗೂ ಗ್ರಾಮಸ್ಥರಿಗೆ ಹೆಚ್ಚಿನ ಸೌಲಭ್ಯ ಒದಗಿಸುವಲ್ಲಿ ಪ್ರಾಮಣಿಕ ಪ್ರಯತ್ನ ಮಾಡಲಾಗಿದೆ ಎಂದರು. ಸಾರ್ವಜನಿಕರಿಂದ 2021-22ನೇ ಸಾಲಿನಲ್ಲಿ ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವವರಿಂದ ಅರ್ಜಿ ಸ್ವೀಕರಿಸಲಾಯಿತು. ಮಾಜಿ ಸದಸ್ಯರಾದ ರಘುಚಂದ್ರ ಬಲ್ಲಾಳ್ ಗ್ರಾಮಸ್ಥರು ಉಪಸ್ಥಿತರಿದ್ದರು. ಬಳಿಕ ಗ್ರಾ.ಪಂ. ಸುತ್ತಲು ಸ್ವಚ್ಚತೆಯನ್ನು ಮಾಡಲಾಯಿತು. ಗ್ರಾ. ಪಂ. ಕಾರ್ಯದರ್ಶಿ ಗುರುವ ಎಸ್. ಸ್ವಾಗತಿಸಿ ವಂದಿಸಿದರು. ಸಿಬ್ಬಂದಿಗಳಾದ ಧನ್‌ರಾಜ್. ಕೆ, ಗಿರಿಜ, ವಿಶಾಲಕ್ಷಿ, ಅಬ್ದುಲ್ ರಫೀಕ್, ಕುಶಾಲ ಹಾಗೂ ಗ್ರಾಂಥಪಾಲಕಿ ಪ್ರವೀಣಿ, ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.