HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೆಯ್ಯೂರು: ಗಾಂಧೀ ಸ್ಮೃತಿ, ನವ ಜೀವನೋತ್ಸವ, ಸ್ವಚ್ಛತಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ವತಿಯಿಂದ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೆದಂಬಾಡಿ ವಲಯ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೆದಂಬಾಡಿ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧೀಸ್ಮೃತಿ ಮತ್ತು ನವಜೀವನೋತ್ಸವ ಕಾರ್ಯಕ್ರಮ ಅ.2ರಂದು ಕೆಯ್ಯೂರು ಶ್ರೀ ಮಹಿಮಷರ್ಧಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಜನಜಾಗೃತಿ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ದಂಬೆಕ್ಕಾನ ಸದಾಶಿವ ರೈಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧಿಯವರ ಜೀವನ ಆದರ್ಶಗಳನ್ನು ವಿವರಿಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಜನಜಾಗೃತಿ ವೇದಿಕೆಯ ಕೆಯ್ಯೂರು ಗ್ರಾಮ ಸಮಿತಿ ಅಧ್ಯಕ್ಷ , ಗ್ರಾಪಂ ಮಾಜಿ ಸದಸ್ಯ ಅಬ್ದುಲ್ ಖಾದರ್ ಮೇರ್ಲರವರು ಮಾತನಾಡಿ, ಗಾಂಧಿಯವರ ಜೀವನ ತತ್ವಗಳ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ.ಗಾಂಧಿ ನಮಗೆಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದರು. ತಾಲೂಕು ಸಮನ್ವಯಾಧಿಕಾರಿ ಸುಜಾತರವರು ಕಾರ್ಯಕ್ರಮದ ಉದ್ದೇಶ, ಪ್ರಯೋಜನ ಮತ್ತು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ವೇದಿಕೆಯಲ್ಲಿ ಕೆದಂಬಾಡಿ ವಲಯ ನವಜೀವನ ಸಮಿತಿ ಅಧ್ಯಕ್ಷ ಬೇಬಿ ಪೂಜಾರಿ ದೇರ್ಲ ಉಪಸ್ಥಿತರಿದ್ದರು.
ಜಯಾ ಪಿ ರೈ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ರೋಹಿಣಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ದೇವಳದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಇದರಲ್ಲಿ ನವ ಜೀವನ ಸಮಿತಿ ಸದಸ್ಯರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸದಸ್ಯರುಗಳು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.