HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಚಂದಳಿಕೆ: ಬಿಜೆಪಿ ಗ್ರಾಮಾಂತರ ಮಂಡಲ, ವಿಟ್ಲ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

Puttur_Advt_NewsUnder_1
Puttur_Advt_NewsUnder_1


ವಿಟ್ಲ: ಯಾವುದೇ ರೀತಿಯ ಜವಾಬ್ದಾರಿಗೆ ಹೋಗುವ ಮೊದಲು ನಮ್ಮನ್ನು ನಾವು ತಯಾರು ಮಾಡಿಕೊಂಡಿದ್ದೇವಾ ಎಂದು ಅವಲೋಕಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು.
ಚಂದಳಿಕೆ ಭಾರತ ಆಡಿಟೋರಿಯಂನಲ್ಲಿ ಅ.೪ರಂದು ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ವಿಟ್ಲ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮೂಹಿಕ ತೀರ್ಮಾನವನ್ನು ಗೌರವಿಸಿ ಮುನ್ನಡೆಯುವ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕು. ಸಮಾಜದ ಮಧ್ಯೆ ಕಷ್ಟದಲ್ಲಿ ಇರುವವರ ಬಗ್ಗೆ ಗಮನಕೊಟ್ಟು ಸರ್ಕಾರದ ಯೋಜನೆ ತಲುಪಿಸುವ ಕಾರ್ಯದಿಂದ ಬಿಜೆಪಿ ಬೆಳೆಯಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ, ರೈತರಿಂದ ಆಯ್ಕೆಯಾದ ಬಿಜೆಪಿ ಸರ್ಕಾರ ಸದಾ ರೈತರ ಪರವಾಗಿದೆ. ಗ್ರಾಮೀಣ ಪ್ರದೇಶದ ರೈತರ, ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಲಾಗುತ್ತಿದೆ. ದೇಶದಲ್ಲಿ ಬಿಜೆಪಿ ಸದಸ್ಯತ್ವ ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಸಮಾಜದಲ್ಲಿ ಸೇವಾ ಮನೋಭಾವದ ಮೂಲಕ ಪ್ರತಿಯೊಬ್ಬ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು. ಶಕ್ತಿಶಾಲಿ ಸ್ವಾಭಿಮಾನ ಭಾರತದ ನಿರ್ಮಾಣವಾಗಬೇಕೆಂಬ ಕನಸನ್ನು ಬಿಜೆಪಿ ಹೊಂದಿದೆ ಎಂದು ಹೇಳಿದರು.

ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ಸದಸ್ಯ ಜಗದೀಶ್ ಪಾಣೆಮಜಲು, ವಿಟ್ಲ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ:
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಶಾಸಕ ಸಂಜೀವ ಮಠಂದೂರು ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿ, ಸನ್ಮಾನಿಸಲಾಯಿತು.  ಗೋವರ್ಧನ ಕುಮಾರ್ ಪ್ರಾರ್ಥಿಸಿದರು. ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ ಸ್ವಾಗತಿಸಿದರು. ಪುತ್ತೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಪದಾಧಿಕಾರಿಗಳ ಪರಿಚಯ ಮಾಡಿದರು. ಪಟ್ಟಣ ಪಂಚಾಯಿತಿ ಸದಸ್ಯ ರಾಮದಾಸ ಶೆಣೈ ವಂದಿಸಿದರು. ಪುತ್ತೂರು ಮಂಡಲ ಸದಸ್ಯ ಮೋಹನದಾಸ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.