HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ರಸ್ತೆ ಅತಿಕ್ರಮಣಗೊಳಿಸಿದ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮಕೈಗೊಳ್ಳದ ಇಲಾಖಾಧಿಕಾರಿಗಳ ವಿರುದ್ಧ ದಲಿತ್ ಸೇವಾ ಸಮಿತಿ ವತಿಯಿಂದ ಪುಣಚ ಗ್ರಾ.ಪಂ. ಮುಂಭಾಗದಲ್ಲಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಪುಣಚ ಗ್ರಾ.ಪಂ ವ್ಯಾಪ್ತಿಯ ಪದವು ಕೊಪ್ಪಳ ರಸ್ತೆಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಸಾರ್ವಜನಿಕರಿಗೆ ಸಂಚಾರ ನಿಷೇಧಿಸಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನ ನಿರ್ಲಕ್ಷ್ಯ್ ವಿರುದ್ಧ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಆಶ್ರಯದಲ್ಲಿ ಅ.೫ರಂದು ಪುಣಚ ಗ್ರಾ.ಪಂ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕ್ಕಾಡುರವರು ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನ ನಿರ್ಲಕ್ಷ್ಯದ  ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮುಂದಿನ ಹತ್ತು ದಿನದೊಳಗೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿರು. ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ್, ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೊಳ್ಮಾರು ಸಹಿತ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು‌. ಮೇಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ  ಮುಂದಿನ ಹತ್ತು ದಿನದ ಒಳಗೆ ಇದಕ್ಕೊಂದು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಪುಣಚ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಲಾವಣ್ಯರವರು ಪ್ರತಿಭಟನಾಕಾರರು ನೀಡಿದ ಮನವಿಗೆ ಹಿಂಬರಹ ನೀಡಿದ ಬಳಿಕ ಪ್ರತಿಭಟನೆಯನ್ನು ನಿಲ್ಲಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.