ಕೊರೋನಾ ಸಂಕಷ್ಟದ ಸಮಯದಲ್ಲಿ ಮಾಡಿದ ಕಾರುಣ್ಯ ಸೇವೆಗಾಗಿ ಕ.ರ.ವೇ ದ.ಕ ಜಿಲ್ಲಾಧ್ಯಕ್ಷ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಬೆಂಗಳೂರಿನಲ್ಲಿ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಮಾಡಿದ ಜನಪರವಾದ ಕಾರುಣ್ಯ ಸೇವೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದ.ಕ ಜಿಲ್ಲಾಧ್ಯಕ್ಷ ಹಾಜಿ ಮಹಮ್ಮದ್ ಕುಕ್ಕುವಳ್ಳಿ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಕಾರುಣ್ಯ ಸೇವೆಗಾಗಿ ರಾಜ್ಯದ ನಾಲ್ಕು ಮಂದಿಗೆ ಅ.5ರಂದು ಬೆಂಗಳೂರಿನಲ್ಲಿ ಸನ್ಮಾನ ಕಾರ್ಯ ನಡೆದಿದ್ದು ಕೊರೋನಾ ಸಂದರ್ಭದಲ್ಲಿ ನಿರಂತರವಾಗಿ ಸಲ್ಲಿಸಿರುವ ಸಮಾಜಸೇವೆಗಾಗಿ ಸನ್ಮಾನಿಸಿ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ.

ಬಡವರ ಪರವಾಗಿ ನಿರಂತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರ ನೇತೃತ್ವದಲ್ಲಿ ಈಗಾಗಲೇ 24 ಕುಟುಂಬಗಳ ಮನೆಗಳನ್ನು ದುರಸ್ತಿ ಮಾಡಿ ಕೊಡಲಾಗಿದೆ, ಅಲ್ಲದೇ ನೂರಾರು ಬಡವರಿಗೆ ಆಹಾರದ ಕಿಟ್‌ನ್ನು ವಿತರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.