HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಹಿರಿಯ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರಗೆ ಡಾ. ಕಾರಂತ ಬಾಲವನ ಪ್ರಶಸ್ತಿ |ಅ.10ರಂದು ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕನ್ನಡ ಮತ್ತು ತುಳು ಭಾಷಾ ಸಾಹಿತಿ, ಹಿರಿಯ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಅವರಿಗೆ ೨೦೨೦ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಪ್ರಧಾನ ಸಮಾರಂಭ ಅ.೧೦ರಂದು ಅಪರಾಹ್ನ ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಡಾ. ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಪುತ್ತೂರು ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಮಾಹಿತಿ ನೀಡಿದರು. ಸಾಹಿತಿ, ಸಂಶೋಧಕ, ನಿವೃತ್ತ ಪ್ರಾಧ್ಯಾಪಕರಾಗಿರುವ ಪ್ರೊ. ಅಮೃತ ಸೋಮೇಶ್ವರ ಅವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಬಾಲವನ ಪ್ರಶಸ್ತಿ ನೀಡಲಾಗುತ್ತಿದೆ. ಯಕ್ಷಗಾನ, ಭೂತಾರಾಧನೆ, ಜಾನಪದ ಇತ್ಯಾದಿ ಕ್ಷೇತ್ರಗಳಲ್ಲಿ ವ್ಯಾಪಕ ಸಂಶೋಧನೆ ನಡೆಸಿರುವ ಅವರು ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಡಾ. ಕಾರಂತರ ದಾರಿಯಲ್ಲಿ ಸಾಗಿ ಬಂದಿರುವ ಅವರು ಸಾಹಿತ್ಯ, ಸಂಶೋಧನೆ, ಕಲೆ, ವಿಜ್ಞಾನ, ಪರಿಸರ ಹೀಗೆ ಹಲವು ವಿಭಾಗಗಳಲ್ಲಿ ವೈವಿದ್ಯಮಯ ಚಟುವಟಿಕೆ ಮತ್ತು ಕೃತಿಗಳನ್ನು ಹೊರತಂದಿದ್ದಾರೆ ಎಂದ ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಅವರು ನನಗೂ ಗುರುಗಳಾಗಿದ್ದರು ಎಂದು ನೆನಪಿಸಿಕೊಂಡರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ್ ಡಾ. ಕಾರಂತರ ಬಗ್ಗೆ ಉಪನ್ಯಾಸ ಮತ್ತು ಡಾ. ಅಮೃತ ಸೋಮೇಶ್ವರ ಅವರಿಗೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಕೋವಿಡ್-೧೯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಿಯಮ ಮೀರದಂತೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಆರಂಭಕ್ಕೆ ಮೊದಲು ಮತ್ತು ಸಭಾ ಕಾರ್ಯಕ್ರಮಗಳ ಬಳಿಕ ಕರಾವಳಿಯ ಪ್ರಸಿದ್ದ ಹಾಗೂ ಹಿರಿಯ ಕಲಾವಿದರಿಂದ ತಾಳಮದ್ದಳೆ ನಡೆಯಲಿದೆ ಎಂದು ತಿಳಿಸಿದರು.

ಪ್ರಶಸ್ತಿಯಲ್ಲಿ ರೂ. ೨೫ಸಾವಿರ ನಗದು:
ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅವರು ಮಾತನಾಡಿ ಡಾ. ಕುರುಂಜಿ ವೆಂಕಟ್ರಮಣ ಗೌಡ ಹೆಸರಿನ ದತ್ತಿ ನಿಧಿಯಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯು ರೂ. ೨೫ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ೨೦೧೦ರಿಂದ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಹಿಂದೆ ಬೊಳುವಾರು ಮಹಮ್ಮದ್ ಕುಂಞಿ(ಸಾಹಿತ್ಯ), ಪ್ರಮೋದ್ ಕುಮಾರ್ ವಿಎಸ್ ಮತ್ತು ಭಾರ್ಗವ ವಿ.ಎಸ್(ಬಾಲ ವಿಜ್ಞಾನ), ಪೇತ್ರಿ ಮಾಧವ ನಾಯ್ಕ(ಯಕ್ಷಗಾನ), ಚಿದಂಬರ ರಾವ್ ಜಂಬೆ(ನಾಟಕ) ವಿ. ಶೇಷಾದ್ರಿ(ಚಲನ ಚಿತ್ರ), ನಾಗೇಶ ಹೆಗಡೆ(ಪರಿಸರ ಮತ್ತು ವಿಜ್ಞಾನ ಪತ್ರಕರ್ತರು), ವೈದೇಹಿ(ಸಾಹಿತ್ಯ), ಬನ್ನಂಜೆ ಸಂಜೀವ ಸುವರ್ಣ(ಯಕ್ಷಗಾನ), ಜಯಂತ ಕಾಯ್ಕಿಣಿ( ಸಾಹಿತ್ಯ ಮತ್ತು ಚಿಂತಕ) ಇವರಿಗೆ ಡಾ. ಕಾರಂತರ ಬಾಲವನದಲ್ಲಿ ಪ್ರಧಾನ ಮಾಡಿ ಗೌರವಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ್ ಕೇನಾಜೆ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.