ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಶಶಿಧರ್ ಕಿನ್ನಿಮಜಲುರವರಿಗೆ ಪಿತೃವಿಯೋಗ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಶಶಿಧರ್ ಕಿನ್ನಿಮಜಲುರವರ ತಂದೆ ಗಿರಿಯಪ್ಪ ಪೂಜಾರಿ(೭೦ವ.)ರವರು ಅ.೭ ರಂದು ಅಸೌಖ್ಯದಿಂದ ನಿಧನ ಹೊಂದಿದ್ದಾರೆ.

ಮೃತ ಗಿರಿಯಪ್ಪ ಪೂಜಾರಿರವರು ಕುರಿಯ-ಕಿನ್ನಿಮಜಲು ಬ್ರಹ್ಮ ಬೈದೆರ್ಕಳ ಗರಡಿಯನ್ನು ಕಳೆದ ಹದಿನೆಂಟು ವರ್ಷಗಳಿಂದ ಮುನ್ನೆಡುಸುತ್ತಾ ಬಂದಿರುತ್ತಾರೆ. ಅಲ್ಲದೆ ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು ಇದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶೀಲಾವತಿ, ಪುತ್ರರಾದ ಶಶಿಧರ್ ಕಿನ್ನಿಮಜಲು, ಸತೀಶ್ ಪೂಜಾರಿ ಕಿನ್ನಿಮಜಲುರವರನ್ನು ಅಗಲಿದ್ದಾರೆ. ಮೃತರ ಮನೆಗೆ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲು ಹಾಗೂ ಪದಾಧಿಕಾರಿಗಳು, ಸದಸ್ಯರು, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ರೋಟರಿ ಅಸಿಸ್ಟಂಟ್ ಗವರ್ನರ್ ಸಚ್ಚಿದಾನಂದ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಕೃಷ್ಣನಾರಾಯಣ ಮುಳಿಯ ಹಾಗೂ ಪದಾಧಿಕಾರಿಗಳು, ಸದಸ್ಯರು, ಕುಕ್ಕುತ್ತಡಿ ಬ್ರಹ್ಮ ಬೈದೇರ್ಕಳ ಗರಡಿಯ ಆಡಳಿತ ಮೊಕ್ತೇಸರ ಜಯರಾಂ ಪೂಜಾರಿ ಸಹಿತ ಹಲವರು ಭೇಟಿ ನೀಡಿ ಸಾಂತ್ವನ ನುಡಿದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.