HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯಲ್ಲಿ ಕೋವಿಡ್ ಸುರಕ್ಷತೆಯ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸೋಂಕು ಹರಡದಂತೆ ತಡೆಯಲು ಸರಕಾರ ನಿರ್ದೇಶಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಅನಿವಾರ್ಯವಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಹೇಳಿದರು. ಅಲ್ಲದೆ ವೈಯಕ್ತಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ವೈಯಕ್ತಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ‘ಕೋವಿಡ್ ಸುರಕ್ಷತೆಯ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ’ದಲ್ಲಿ ಪ್ರತಿಜ್ಞೆ ಬೋಧಿಸಿ ಮಾತನಾಡಿದರು.

 

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ಹರಿಪ್ರಸಾದ್ ಎಸ್ ಪ್ರಾಸ್ತವಿಕ ಮಾತುಗಳನ್ನಾಡಿದರು. ಸರಕಾರಿ ಕಛೇರಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮುಖಾಂತರ ಕೋವಿಡ್-೧೯ ಸೋಂಕು ತಡೆಯಲು ಪ್ರಮಾಣಿಕ ಪ್ರಯತ್ನ ಮಾಡುವುದು ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಮತ್ತು ಕಛೇರಿ ಸಿಬ್ಬಂದಿಗಳು ಹಾಜರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.