HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೊನೆಗೂ ನಗರಸಭೆಗೆ ಮೀಸಲಾತಿ ಪಟ್ಟಿ ಪ್ರಕಟ: ಅಧ್ಯಕ್ಷತೆಗೆ ಬಿಸಿಬಿ.,ಉಪಾಧ್ಯಕ್ಷತೆಗೆ ಸಾಮಾನ್ಯ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಕೊನೆಗೂ ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.ಪುತ್ತೂರು ನಗರಸಭೆಯ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗ ಬಿ(ಬಿಸಿಬಿ) ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮೀಸಲುಗೊಳಿಸಲಾಗಿದೆ.
೩೧ ಸದಸ್ಯ ಸ್ಥಾನ ಹೊಂದಿರುವ ಪುತ್ತೂರು ನಗರಸಭೆಗೆ ೨೦೧೮ರ ಆಗಸ್ಟ್ ೩೧ರಂದು ಚುನಾವಣೆ ನಡೆದಿದ್ದು ಬಿಜೆಪಿ ೨೫ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದುಕೊಂಡಿದ್ದರೆ, ಕಾಂಗ್ರೆಸ್ ೫ ಸ್ಥಾನಗಳಲ್ಲಿ ಹಾಗೂ ಒಂದರಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಗೆಲುವು ಸಾಧಿಸಿದ್ದರು.
ಇದೀಗ ಕೊನೆಗೂ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಯಾಗಿರುವುದರಿಂದ ಅಧ್ಯಕ್ಷ,ಉಪಾಧ್ಯಕ್ಷರು ಯಾರಾಗಲಿದ್ದಾರೆ ಎನ್ನುವುದು ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿದೆ.
ಮೀಸಲಾತಿ ಪಟ್ಟಿ ಪ್ರಕಟ: ೨೦೧೮ರಲ್ಲಿ ಚುನಾವಣೆ ನಡೆದಿರುವ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಇದರಲ್ಲಿ ಪುತ್ತೂರು ನಗರಸಭೆಯೂ ಸೇರಿದೆ. ೨೦೧೮ರಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಫಲಿತಾಂಶ ಪ್ರಕಟವಾದ ಕೂಡಲೇ ಸರಕಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿತ್ತು. ಅದರಂತೆ ಪುತ್ತೂರು ನಗರಸಭೆಯ ಅಧ್ಯಕ್ಷ ಸ್ಥಾನವನ್ನು `ಸಾಮಾನ್ಯ ಮಹಿಳೆ’ಗೆ ಮತ್ತು ಉಪಾಧ್ಯಕ್ಷ ಸ್ಥಾನವನ್ನು `ಪರಿಶಿಷ್ಟ ಜಾತಿ ಮಹಿಳೆ’ಗೆ ಮೀಸಲಿರಿಸಿತ್ತು. ಆದರೆ ಆ ವೇಳೆಗೆ ರಾಜ್ಯದ ಹಲವೆಡೆಯ ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಹಲವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕಟಗೊಂಡಿದ್ದ ಮೀಸಲಾತಿ ಪಟ್ಟಿಯನ್ನು ತಡೆ ಹಿಡಿಯಲಾಗಿತ್ತು. ಇದರಿಂದಾಗಿ ಚುನಾಯಿತ ಜನಪ್ರತಿನಿಧಿಗಳ ಆಡಳಿತದ ಬದಲು ಅಧಿಕಾರಿಗಳೇ ಆಡಳಿತ ನಡೆಸುವಂತಾಗಿತ್ತು. ಮೀಸಲಾತಿ ಗೊಂದಲವನ್ನು ಸರಿ ಪಡಿಸದೇ ಇರುವುದರಿಂದ ಚುನಾಯಿತ ಜನಪ್ರತಿನಿಧಿಗಳು ಆಡಳಿತ ನಡೆಸಲು ಅವಕಾಶವಾಗದೇ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿದೆ ಎಂದು ವ್ಯಾಪಕ ಆಕ್ರೋಶ, ಪ್ರತಿಭಟನೆ ವ್ಯಕ್ತವಾಗಿತ್ತು. ಇತ್ತೀಚೆಗೆ ರಾಜ್ಯ ಸರಕಾರ ಮೀಸಲಾತಿ ಗೊಂದಲವನ್ನು ಸರಿಪಡಿಸಿ ಪರಿಷ್ಕೃತ ಪಟ್ಟಿ ಸಿದ್ಧಪಡಿಸುವುದಾಗಿ ಹೈಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರಕಾರ ಆದೇಶ ಹೊರಡಿಸಿದ್ದು ಪುತ್ತೂರು ನಗರಸಭೆಯ ಅಧ್ಯಕ್ಷ ಸ್ಥಾನವನ್ನು `ಸಾಮಾನ್ಯ ಮಹಿಳೆ’ಗೆ ಮತ್ತು ಉಪಾಧ್ಯಕ್ಷ ಸ್ಥಾನವನ್ನು `ಪರಿಶಿಷ್ಟ ಪಂಗಡ’ಕ್ಕೆ ನಿಗದಿಗೊಳಿಸಲಾಗಿತ್ತು. ಆದರೆ ಅದು ಮತ್ತೆ ಬದಲಾವಣೆಗೊಂಡಿದ್ದು, ಹೊಸ ಮೀಸಲಾತಿ ಪ್ರಕಟವಾಗಿದೆ. ನಗರಸಭೆಯ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಯವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಆಯ್ಕೆ ಪ್ರಕ್ರಿಯೆಗೆ ಸದ್ಯದಲ್ಲಿಯೇ ದಿನಾಂಕ ಘೋಷಣೆ ಮಾಡಲಿದ್ದು ಕೆಲವೇ ದಿನಗಳಲ್ಲಿ ಪುತ್ತೂರು ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.