HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಶಾಲಾ-ಕಾಲೇಜು ಆರಂಭದ ಬಗ್ಗೆ  ಯಾವುದೇ ತೀರ್ಮಾನ ಮಾಡಿಲ್ಲ-ಸಿಎಂ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ಸೋಂಕು ಹೆಚ್ಚು ಇರುವ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಮುಖ್ಯಮಂತ್ರಿಯವರು ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಿರುವ ಬಗ್ಗೆ ವಿವರವಾದ ಮಾಹಿತಿ ಪಡೆದಿzನೆ. ಕಳೆದ ಒಂದು ವಾರದಿಂದ ಇದರ ನಿಯಂತ್ರಣಕ್ಕೆ ಕಠಿಣ ಪ್ರಯತ್ನ ನಡೆಯುತ್ತಿದೆ. ಎಲ್ಲರ ಪ್ರಯತ್ನದಿಂದ ಸಾವಿನ ಸಂಖ್ಯೆ ಶೇಕಡಾ ಒಂದಕ್ಕಿಂತ ಕಡಿಮೆಯಾಗಿದೆ.ತುಮಕೂರು, ಮೈಸೂರು, ಧಾರವಾಡ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾವಿನ ಮತ್ತು ಸೋಂಕಿತರ ಸಂಖ್ಯೆ ಹೆಚ್ಚಿದೆ. ಉಳಿದ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಮುಂದಿನ ಒಂದು ವಾರದಲ್ಲಿ ಇನ್ನಷ್ಟು ನಿಯಂತ್ರಣಕ್ಕೆ ಶ್ರಮಿಸಿ ಆನಂತರ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. 

 

ಸರಕಾರದ ಮಾರ್ಗಸೂಚಿ ಪ್ರಕಾರ ಶಾಲೆ

ಆರಂಭಿಸಲು ಸಿದ್ಧ:ಡಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ಶಾಲೆ ಆರಂಭಿಸಲು ಸಿದ್ಧ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದ್ದಾರೆ.ಶಾಲಾರಂಭದ ಕುರಿತು ಅ.೮ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ವೇಳೆ ಮಾತನಾಡಿರುವ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಜಿಲ್ಲೆಯ ಅರ್ಧದಷ್ಟು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಈ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಗತಿ ನಡೆಸಬಹುದು ಉಳಿದ ಅರ್ಧದಷ್ಟು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದಿದ್ದಾರೆ

.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.