HomePage_Banner
HomePage_Banner
HomePage_Banner
HomePage_Banner
HomePage_Banner

ಎಸೆಸ್ಸೆಲ್ಸಿ:ಸ್ಫೂರ್ತಿ ರೈರವರಿಗೆ ಡಿಸ್ಟಿಂಕ್ಷನ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಸಕ್ತ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಮಾರ್ನೆಮಿಗುಡ್ಡೆ ನಿವಾಸಿ ಭಾಸ್ಕರ ರೈ ಹಾಗೂ ಶಾರದಾ ಬಿ.ರೈ ದಂಪತಿ ಪುತ್ರಿ ಸ್ಫೂರ್ತಿ ರೈಯವರು ೬೦೯ ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.

ಬ್ಯಾಡ್ಮಿಂಟನ್ ಪ್ರತಿಭೆಯಾಗಿರುವ ಸ್ಫೂರ್ತಿ ರೈಯವರು ವಿಟ್ಟಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ. ೨೦೧೯ರ ನವೆಂಬರ್ ತಿಂಗಳಿನಲ್ಲಿ ಮಧ್ಯಪ್ರದೇಶದಲ್ಲಿ ನಡೆದ ೧೭ರ ವಯೋಮಿತಿಯೊಳಗಿನ ರಾಷ್ಟ್ರ ಮಟ್ಟದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ, ೨೦೧೫ರಲ್ಲಿ ಉಡುಪಿಯಲ್ಲಿ ನಡೆದ ೧೪ರ ವಯೋಮಿತಿಯ ರಾಜ್ಯ ಮಟ್ಟದ ಖೇಲೋ ಇಂಡಿಯಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ, ೨೦೧೭ರಲ್ಲಿ ಬೆಳ್ಗಾಂನಲ್ಲಿ ನಡೆದ ೧೪ರ ವಯೋಮಿತಿಯ ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ, ೨೦೧೮ರಲ್ಲಿ ಮೈಸೂರಿನಲ್ಲಿ ನಡೆದ ೧೪ರ ವಯೋಮಿತಿಯ ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕವನ್ನು ಸ್ಫೂರ್ತಿ ರೈಯವರು ಪಡೆದುಕೊಂಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.