HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೊನೆಗೂ ಎಚ್ಚೆತ್ತ ಸರ್ಕಾರ‌- ವಿದ್ಯಾಗಮ ಸ್ಥಗಿತಕ್ಕೆ ನಿರ್ಧಾರ

Puttur_Advt_NewsUnder_1
Puttur_Advt_NewsUnder_1


ಪುತ್ತೂರು:  ಶಿಕ್ಷಕರಿಗೆ ಮಾರಕವಾಗಿದ್ದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ. ವಿದ್ಯಾಗಮ ಯೋಜನೆಯಡಿ ಮಕ್ಕಳಿಗೆ ಪಾಠ ಮಾಡಲು ತೆರಳಿದ್ದ ಸುಮಾರು 100ಕ್ಕೂ ಹೆಚ್ಚು ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ರಾಜ್ಯಾದ್ಯಂತ ಆಗ್ರಹಗಳು ಕೇಳಿಬಂದಿದ್ದವು. ಅಲ್ಲದೇ ಸರ್ಕಾರಕ್ಕೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಅಭಿಯಾನ ಆರಂಭಿಸಿದ್ದವು. ವಿದ್ಯಾಗಮ ಯೋಜನೆ ವಿರುದ್ಧ ಆಕ್ರೋಶ ಹೆಚ್ಚುತ್ತಿದ್ದಂತೆ ಒತ್ತಡಕ್ಕೆ ಮಣಿದ ಸರ್ಕಾರ ಯೋಜನೆ ಸ್ಥಗಿತಗೊಳಿಸಲು ಮುಂದಾಗಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಜಿಲ್ಲಾವಾರು ವರದಿ ಬರುವವರೆಗೆ ಯೋಜನೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.