HomePage_Banner
HomePage_Banner
HomePage_Banner
HomePage_Banner
HomePage_Banner

ಹಿರೇಬಂಡಾಡಿ: ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಹಿರೇಬಂಡಾಡಿ: ಬಿಜೆಪಿ ಗ್ರಾಮಾಂತರ ಮಂಡಲ ಪುತ್ತೂರು ಹಾಗೂ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ಹಿರೇಬಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಅ.9ರಂದು ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಹಿರೇಬಂಡಾಡಿ ಶಾಖಾ ಸಭಾಭವನದಲ್ಲಿ ನಡೆಯಿತು.


ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನೆಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕುಟುಂಬ ಸದಸ್ಯರು ಪಾಲ್ಗೊಳ್ಳುವಂತೆ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಗ್ರಾಮದ ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದೇ ಕಡೆ ಒಟ್ಟು ಸೇರಿ ಪಕ್ಷ ಬಲಪಡಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಮುಂದಿನ ಗ್ರಾ.ಪಂ.ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಇಲ್ಲಿನ ಗ್ರಾ.ಪಂ.ನಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಇದಕ್ಕೆ ಪ್ರತಿಯೊಬ್ಬ ಕಾರ್ಯಕರ್ತರು ಸಕ್ರೀಯರಾಗಿ ಕೆಲಸ ಮಾಡಬೇಕೆಂದು ಹೇಳಿದರು.

ಶಾಸಕ ಸಂಜೀವ ಮಠಂದೂರುರವರು ಮಾತನಾಡಿ, ಕಳೆದ ಗ್ರಾ.ಪಂ.ಚುನಾವಣೆಯಲ್ಲಿ ಹಿರೇಬಂಡಾಡಿಯಲ್ಲಿ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ಮುಂದಿನ ಗ್ರಾ.ಪಂ.ಚುನಾವಣೆಯಲ್ಲಿ ಎಲ್ಲಾ 15 ಸ್ಥಾನಗಳಲ್ಲೂ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಆ ಮೂಲಕ ಪುತ್ತೂರು ತಾಲೂಕಿಗೆ ಹಿರೇಬಂಡಾಡಿ ಮಾದರಿ ಗ್ರಾಮ ಪಂಚಾಯತ್ ಆಗಿ ಮೂಡಿಬರಬೇಕು. ಸರಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಕಾರ್ಯಕರ್ತರು ಮನೆ ಮನೆಗೆ ತೆರೆಳಿ ಸರಕಾರದ ಸಾಧನೆಯನ್ನು ತಿಳಿಸಬೇಕೆಂದರು.

ಬಿಜೆಪಿ ಯುವಮೋರ್ಚಾದ ಪುತ್ತೂರು ತಾಲೂಕು ಅಧ್ಯಕ್ಷ ಸುನಿಲ್ ದಡ್ಡು, ತಾ.ಪಂ.ಸದಸ್ಯ ಮುಕುಂದ ಬಜತ್ತೂರು, ಉಪ್ಪಿನಂಗಡಿ ಶಕ್ತಿ ಕೇಂದ್ರದ ಪ್ರಮುಖ್ ಸುರೇಶ್ ಅತ್ರಮಜಲು, ಹಿರೇಬಂಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಯಾನಂದ ಸರೋಳಿ, ಹಿರೇಬಂಡಾಡಿ ಗ್ರಾ.ಪಂ.ನಿಕಟಪೂರ್ವ ಸದಸ್ಯೆ ಚಂದ್ರಾವತಿ ನೆಹರುತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾ.ಪಂ.ಮಾಜಿ ಸದಸ್ಯರು, ಬಿಜೆಪಿ ಕಾರ್ಯಕರ್ತರು, ವಿವಿಧ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು. ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಶೌಕತ್ ಆಲಿ ಸ್ವಾಗತಿಸಿ, ನಿಕಟಪೂರ್ವ ಸದಸ್ಯ ಸೋಮೇಶ್ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.