HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಏಣಿತ್ತಡ್ಕ: ಕೊರಂತಾಜೆ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ| ಏಣಿತ್ತಡ್ಕ-ಕಕ್ವೆ-ಆಲಂಕಾರು ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ: ಎಸ್.ಅಂಗಾರ

Puttur_Advt_NewsUnder_1
Puttur_Advt_NewsUnder_1

ಕಡಬ: ಶಾಸಕರ 10 ಲಕ್ಷ ರೂ.ಅನುದಾನದಲ್ಲಿ ಕೊಲ ಗ್ರಾಮದ ಏಣಿತಡ್ಕ ಪರಿಶಿಷ್ಠ ಪಂಗಡ ಕಾಲೋನಿಯ ಕೊರಂತಾಜೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಅ.9ರಂದು ಶಿಲಾನ್ಯಾಸ ನೆರವೇರಿಸಲಾಯಿತು.


ಸುಳ್ಯ ಶಾಸಕ ಎಸ್.ಅಂಗಾರವರು ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದ ಬಳಿಕ ಸುಳ್ಯ ವಿಧಾನಸ ಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದನ್ನು ಜನರಿಗೆ ತಿಳಿಸಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಲು ಕಾರ್ಯಕರ್ತರು ಸಜ್ಜಾಗಬೇಕೆಂದು ಹೇಳಿದರು. ಸುಳ್ಯ ವಿಧಾನ ಸಭಾ ಕ್ಷೇತ್ರದ 76 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಸಹಿತ ಹಲವು ಅಭಿವೃದ್ಧಿ ಕಾರ್ಯಗಳು ನಡೆದು, ಬಹುತೇಕ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಎಲ್ಲಾ ಸಾಧನೆಗಳ ಬಗ್ಗೆ ನಾವು ಪ್ರಚಾರ ಮಾಡಿಲ್ಲ. ಇದು ಜನರಿಗೆ ತಿಳಿಸುವ ಕಾರ್ಯ ಪಕ್ಷದ ಕಾರ್ಯಕರ್ತರಿಂದ ನಡೆಯಬೇಕಾಗಿದೆ. ಆ ಮೂಲಕ ಪಕ್ಷ ಬಲವರ್ಧನೆ ಹಾಗೂ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಪೂರಕವಾಗಬೇಕು ಎಂದು ಹೇಳಿದ ಶಾಸಕರು ಕೊಲ ಗ್ರಾಮದ ಏಣಿತಡ್ಕ-ಕಕ್ವೆ-ಆಲಂಕಾರು ಸಂಪರ್ಕ ರಸ್ತೆಯನ್ನು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಆರರಿಂದ ಏಳು ಕೋಟಿ ರೂ ಅಗತ್ಯವಿದೆ. ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಡಬ ತಾಲೂಕು ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಸದಸ್ಯೆ ತೇಜಸ್ವಿನಿ ಶೇಖರ್ ಕಟ್ಟಪುಣಿ, ಬಿಜೆಪಿ ನೆಲ್ಯಾಡಿ ಮಹಾಶಕ್ತಿಕೇಂದ್ರದ ಕಾರ್ಯದರ್ಶಿ ಸದಾಶಿವ ಶೆಟ್ಟಿ ಮಾರಂಗ, ಆಲಂಕಾರು ಸಿ.ಎ ಬ್ಯಾಂಕ್ ಅಧ್ಯಕ್ಷ ಧರ್ಮಪಾಲ ರಾವ್ ಕಜೆ, ಕೊಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹೇಮಾಮೋಹನ್‌ದಾಸ್ ಶೆಟ್ಟಿ, ಮಾಜಿ ಸದಸ್ಯರಾದ ಸುಂದರ ನಾಯ್ಕ ಚೆಕ್ಕಿತಡ್ಕ, ಉಮೇಶ್ ಗೌಡ ಸಂಕೇಶ, ಬಿಜೆಪಿ ಮುಖಂಡರಾದ ಚಿದಾನಂದ ಪಾನ್ಯಾಲ್, ನಾಗೇಶ್ ಕಡೆಂಬ್ಯಾಲ್, ನೇತ್ರಾಕ್ಷ ಏಣಿತಡ್ಕ, ನಿರಂಜನ ನಾಯ್ಕ ಏಣಿತಡ್ಕ, ಉದಯ ನಾಯ್ಕ ಏಣಿತಡ್ಕ, ರಂಜಿತ್ ನಾಯ್ಕ ಕೊರಂತಾಜೆ, ಸಂಜೀವ ಪೂಜಾರಿ ಗೋಳಿತ್ತಡಿ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಕೊಲ ಶಕ್ತಿಕೇಂದ್ರದ ಅಧ್ಯಕ್ಷ ರಾಮಚಂದ್ರ ನಾಯ್ಕ ಸ್ವಾಗತಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.