HomePage_Banner
HomePage_Banner
HomePage_Banner
HomePage_Banner
HomePage_Banner

ದರ್ಬೆ: ಬೈಪಾಸ್ ಬಳಿ ಹೊಡೆದಾಟ  ಇತ್ತಂಡದ ಇಬ್ಬರು ಆಸ್ಪತ್ರೆಗೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:ದರ್ಬೆ ಬೈಪಾಸ್ ಬಳಿ ಅ.೧೦ರಂದು ರಾತ್ರಿ ಯುವಕರ ತಂಡಗಳೊಳಗೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದು ಇತ್ತಂಡದ ಇಬ್ಬರು ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾದ ಬಗ್ಗೆ ವರದಿಯಾಗಿದೆ.
ದರ್ಬೆ ಬೈಪಾಸ್ ವೃತ್ತದ ಬಳಿ ಯುವಕರು ಗುಂಪಾಗಿ ಮಾತುಕತೆ ನಡೆಸುತ್ತಿದ್ದ ವೇಳೆ ಏಕಾಏಕಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ.ಅಕ್ಷಯ್ ಎಂಬವರ ತಂಡ ಮತ್ತು ನರ್ಮೇಶ್ ಎಂಬವರ ತಂಡದೊಳಗೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಚಿಕ್ಕಮುಡ್ನೂರು ನಿವಾಸಿ ವಿಖ್ಯಾತ್(೨೩ವ) ಎಂಬವರು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇನ್ನೊಂದು ತಂಡದ ಬನ್ನೂರು ನಿವಾಸಿ ಶರತ್ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಘಟನೆಯಲ್ಲಿ ಭಾಗಿಯಾಗಿದ್ದರೆನ್ನಲಾದ ರೇವಂತ್ ಮತ್ತು ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇವರಲ್ಲಿ ಒಬ್ಬನನ್ನು ಕೋಡಿಂಬಾಡಿ ಶಾಂತಿನಗರದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.