HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ನರೇಂದ್ರ ಮೋದಿ ಬಂದ ಬಳಿಕ ಹೆಣ್ಣು ಮಕ್ಕಳಿಗೆ ರಕ್ಷಣೆ | ಬೇಟಿ ಬಚಾವೊ – ಬೇಟಿ ಪಡಾವೊ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಹೆಣ್ಣು ಮಕ್ಕಳ ಶಿಕ್ಷಣ, ಕಾನೂನಿನ ರಕ್ಷಣೆ ಸೇರಿದಂತೆ ಹಲವು ಯೋಜನೆಗಳಿಗೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಹೆಚ್ಚು ಶಕ್ತಿ ಬಂದಿರುವುದು ಮಾತ್ರವಲ್ಲ ಹೆಣ್ಣು ಮಕ್ಕಳಿಗೆ ರಕ್ಷಣೆ ಸಿಕ್ಕಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಹೇಳಿದರು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ವತಿಯಿಂದ ಬೇಟಿ ಬಚಾವೊ, ಬೇಟಿ ಪಡಾವೂ ಜಾಗೃತಿ ಕಾರ್ಯಕ್ರಮವನ್ನು ಬಪ್ಪಳಿಗೆ ರಾಗಿದಕುಮೇರು ಅಂಗನಾಡಿ ಕೇಂದ್ರದಲ್ಲಿ ಅವರು ಉದ್ಘಾಟಿಸಿ ಮಾತನಾಡಿದರು. ಮಹಿಳೆ ವಿದ್ಯಾವಂತೆ, ಸ್ವಾಭಿಮಾನಿಯಾಗ ಮತ್ತು ದೇಶದ ಸತ್ಪ್ರಜೆಗಳಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣ ಕೊಡಿಸುವ ಕೆಲಸ ಮಾಡಿದ್ದಾರೆ. ಇವತ್ತು ಅಂಗನವಾಡಿ ಕೇಂದ್ರಗಳು ಮಕ್ಕಳ ರಕ್ಷಣೆಯ ಜೊತೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತದೆ. ತಾಯಿ ಮಗುವಿನ ಆರೈಕೆಯಲ್ಲೂ ಅಂಗನವಾಡಿ ಮುಂದಿದೆ ಎಂದರು.

ಹೆಣ್ಣು ಮಗುವಿನ ಜನ್ಮದಿನಾಚರಣೆ:
ಅಂಗನವಾಡಿಯಲ್ಲಿ ಸಲಿಪಾ ಎಂಬ ಮಗುವಿನ ಜನ್ಮದಿನಾಚರಣೆ ಅಂಗವಾಗಿ ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮವನ್ನು ಆಕೆಯ ಕೈಯಿಂದಲೇ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಭಾಮಿ ಆಶೋಕ್ ಶೆಣೈ, ಜೀವಂಧರ್ ಜೈನ್, ಪಿ.ಜಿ.ಜಗನ್ನಿವಾಸ ರಾವ್ ಮತ್ತು ಅಂಚೆ ಇಲಾಖೆಯ ಮಾರ್ಕೆಟಿಂಗ್ ಅಧಿಕಾರಿ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಇಲಾಖೆಯ ಜಲಜಾಕ್ಷಿ, ಅಂಗನವಾಡಿ ಕಾರ್ಯಕರ್ತೆ ಸುಮಿತ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.