ಒಳಮೊಗ್ರು: ಬಿಜೆಪಿ ಶಕ್ತಿ ಕೇಂದ್ರ ಕುಟುಂಬ ಮಿಲನ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪಾಣಾಜೆ ಮಹಾಶಕ್ತಿ ಕೇಂದ್ರಕ್ಕೆ ಸಂಬಂಧಪಟ್ಟ ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮವು ಪಾಣಾಜೆ ಮಹಾಶಕ್ತಿ ಕೇಂದ್ರದ ಚುನಾವಣಾ ಉಸ್ತುವಾರಿ ರಾಜೀವ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಕುಂಬ್ರ ರೈತಭವನ ಕುಂಬ್ರದಲ್ಲಿ ಅ. 11ರಂದು ನಡೆಯಿತು.

 ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು ದೀಪ ಬೆಳಗಿಸಿ ಉದ್ಘಾಟಿಸಿ ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರ ಜವಬ್ದಾರಿಗಳ ಬಗ್ಗೆ ಮಾತನಾಡಿದರು. ಒಳಮೊಗ್ರು ಬಿಜೆಪಿ ಗ್ರಾಮ ಪಂಚಾಯತ್ ಚುನಾವಣ ಪ್ರಭಾರಿ, ಪಾಣಾಜೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯರಾಮ ಪೂಜಾರಿಯವರು ಮುಂಬರುವ ಚುನಾವಣೆಯ ಪೂರ್ವ ತಯಾರಿ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ, ಗ್ರಾಮ ಪಂಚಾಯತ್ ಚುನಾವಣೆಯ ತಾಲೂಕು ಪ್ರಭಾರಿ ನಿತೀಶ್ ಕುಮಾರ್ ಶಾಂತಿವನರವರು, ಕಾರ್ಯಕರ್ತನಾಗಿ ಪಂಚಾಯತ್ ಚುನಾವಣೆಯಲ್ಲಿ ನಮ್ಮ ಜವಾಬ್ದಾರಿ ಏನು ಎಂಬುದರ ಬಗ್ಗೆ ತಿಳಿಸಿದರು. ಅಧ್ಯಕ್ಷೀಯ ಭಾಷಣ ಮಾಡಿದ ರಾಜೀವ ಭಂಡಾರಿಯವರು, ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಯಾವ ರೀತಿಯಾಗಿ ತಂತ್ರಗಾರಿಕೆ ಹಾಗೂ ಪಕ್ಷ ಸೂಚಿಸಿದ ಕೆಲಸವನ್ನು ಚಾಚೂ ತಪ್ಪದೆ ಕಾರ್ಯಕರ್ತರು ನಿರ್ವಹಿಸಿದಲ್ಲಿ ಪಕ್ಷ ಮುಂಬರುವ ಚುನಾವಣೆಯಲ್ಲಿ ಜಯಗಳಿಸುವುದು ನಿಶ್ಚಿತ ಎಂಬ ಮಾತುಗಳನ್ನಾಡಿದರು. ಎ.ಪಿ.ಎಂ.ಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಎಸ್.ಟಿ ಮೋರ್ಚಾ ಉಪಾಧ್ಯಕ್ಷ ಮಂಜುನಾಥ್ ಎನ್ ಎಸ್ ಉಪಸ್ಥಿತರಿದ್ದರು. ಒಳಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ರಾಜೇಶ್ ರೈ ಪರ್ಪುಂಜ ಸ್ವಾಗತಿಸಿದರು. ಮಂಡಲ ಸಮಿತಿ ಸದಸ್ಯೆ ತ್ರಿವೇಣಿ ಪಳ್ಳತ್ತಾರು ವಂದಿಸಿದರು. ಮಂಡಲ ಸಮಿತಿ ಸದಸ್ಯ ಮಹೇಶ್ ರೈ ಕೇರಿ ಕಾರ್ಯಕ್ರಮ ನಿರೂಪಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.