HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಹತ್ರಾಸ್ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಾಗೂ ಅಕ್ರಮ ಬಂಧನಕ್ಕೊಳಗಾಗಿರುವ ಕ್ಯಾಂಪಸ್ ಫ್ರಂಟ್ ನಾಯಕರ ಬಿಡುಗಡೆಗೆ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮನೀಷಾ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲು ತೆರಳಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ನಾಯಕರನ್ನು ಅಕ್ರಮವಾಗಿ ಬಂಧಿಸಿ ಅವರ ಮೇಲೆ ಯುಎಪಿಎ ಕರಾಳ ಕಾನೂನನ್ನು ಹೇರಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಕ್ರಮವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್‌ನಿಂದ ಉಪ್ಪಿನಂಗಡಿಯಲ್ಲಿ ಪ್ರತಿಭಟನೆ ನಡೆಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಮಾತನಾಡಿ ಹತ್ರಾಸ್ ಸಂತಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ವಿದ್ಯಾರ್ಥಿ ನಾಯಕರನ್ನು ಬಂಧಿಸಿ ಯುಎಪಿಎ ಕರಾಳ ಕಾನೂನನ್ನು ಅಕ್ರಮವಾಗಿ ಹೇರಿ ಅನ್ಯಾಯಕ್ಕೊಳಗಾದವರ ಪರ ಮಾತನಾಡುವರ ಬಾಯಿ ಮುಚ್ಚಿಸಲು ಉತ್ತರ ಪ್ರದೇಶದ ಬಿಜೆಪಿ ಸರಕಾರ ಯತ್ನಿಸುತ್ತಿರುವುದು ಭಾರತ ಸಂವಿದಾನಕ್ಕೆ ಕಪ್ಪು ಚುಕ್ಕೆಯಾಗಿದೆ, ಅದಷ್ಟು ಬೇಗ ವಿದ್ಯಾರ್ಥಿ ನಾಯಕರನ್ನು ಬಿಡುಗಡೆಗೊಳಿಸದಿದ್ದಲ್ಲಿ ದೇಶದಾದ್ಯಂತ ಚಳುವಳಿಯನ್ನು ಆರಂಭಿಸಲಾಗುವುದು ಎಂದು ಹೇಳಿದ ಅವರು ಮನೀಷಾ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ವಲಯ ಸದಸ್ಯರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ವಲಯ ಸಮಿತಿ ಆಧ್ಯಕ್ಷ ರಿಜ್ವಾನ್ ಗೊಳಿತೊಟ್ಟು ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.