ಜಲಸಿರಿ ಯೋಜನೆಯಡಿ ಪೈಪ್ ಲೈನ್ ಕಾಮಗಾರಿ : ಕೋಡಿಂಬಾಡಿಯ ಇಡೆಪುಣಿಯಲ್ಲಿ ಮನೆಯಂಗಳಕ್ಕೆ ಉರುಳಿ ಬಿದ್ದ ಮರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಇಡೆಪುಣಿ ಎಂಬಲ್ಲಿ ಮನೆಯ ಅಂಗಳಕ್ಕೆ ಮರ ಉರುಳಿ ಬಿದ್ದ ಘಟನೆ ನಡೆದಿದೆ.

ಪ್ರಸ್ತುತ ಲೋಕೋಪಯೋಗಿ ಇಲಾಖೆಯ ರಸ್ತೆಯಾಗಿದ್ದು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿರುವ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಬದಿಯಲ್ಲಿ 34 ನೆಕ್ಕಿಲಾಡಿಯಿಂದ ಪುತ್ತೂರಿಗೆ ಕುಡಿಯುವ ನೀರು ಸರಬರಾಜು ಆಗುವ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಅದರಂತೆ ಕೋಡಿಂಬಾಡಿಯ ಇಡೆಪುಣಿ ಬಳಿ ನಗರಸಭೆಯ ವತಿಯಿಂದ ಕುಡ್ಸೆಂಪ್ ನ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಅಳವಡಿಸುವ ಕಾಮಗಾರಿ ನಡೆದಿದೆ. ಈ ವೇಳೆ ರಸ್ತೆ ಅಗೆಯಲಾಗಿದೆ. ಇದರಿಂದಾಗಿ ರಸ್ತೆಯ ಅಂಚು ಕುಸಿದಿದ್ದು ರಸ್ತೆ ಬದಿಯಲ್ಲಿದ್ದ ಮರಗಳು ಇಡೆಪುಣಿಯ ದಿನೇಶ್ ಶೆಟ್ಟಿ ಎಂಬವರ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.